ಮೊಂಟೆಪದವಿನಲ್ಲಿ ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!

Edited By:

Updated on: Jun 01, 2025 | 2:23 PM

ಮಂಗಳೂರಿನ ಮೊಂಟೆಪದವು ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟ ದುರಂತ ನಡೆದಿದೆ. ಇನ್ನೂ ಹೆಚ್ಚಿನ ಗುಡ್ಡ ಕುಸಿಯುವ ಭೀತಿ ಶುರುವಾಗಿದೆ. ಎರಡು ಮನೆಗಳು ಮತ್ತು ದೈವಸ್ಥಾನ ಅಪಾಯದಲ್ಲಿದೆ. ಸ್ಥಳೀಯರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ. ರಸ್ತೆಯ ಮೇಲೆ ಗುಡ್ಡದ ಮಣ್ಣು ಬಿದ್ದಿದೆ. ವಿಡಿಯೋ ನೋಡಿ.

ಮಂಗಳೂರು, ಜೂನ್​​ 01: ನಗರದ ಮೊಂಟೆಪದವು ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು (Landslide)  ಮೂವರು ಸಾವನ್ನಪ್ಪಿದ್ದರು. ಇದೀಗ ದುರಂತ ನಡೆದ ಸ್ಥಳದ ಪಕ್ಕದಲ್ಲೇ ಮತ್ತಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಎರಡು ಮನೆ ಹಾಗೂ ದೈವಸ್ಥಾನ ಅಪಾಯದಲ್ಲಿದ್ದು, ಎರಡು ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ‌ಸ್ಥಳಾಂತರಿಸಲಾಗಿದೆ. ಗುಡ್ಡದ ಮೇಲಿನ ಮಣ್ಣು ಕುಸಿಯುತ್ತಲಿದ್ದು, ಈಗಾಗಲೇ ರಸ್ತೆ ಮೇಲೆ ಬಿದ್ದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More