ಭಾರಿ ಮಳೆಗೆ ಮಂಗಳೂರು ಪಂಪ್ವೆಲ್ ಫ್ಲೈಓವರ್ ಕೆಳಭಾಗದಲ್ಲಿ ಪ್ರವಾಹ: ವಾಹನ ಸಂಚಾರ ಅಸ್ತವ್ಯಸ್ತ

Edited By:

Updated on: May 26, 2025 | 10:55 AM

ಮಂಗಳೂರಿನಲ್ಲಿ ಭಾರೀ ಮಳೆಗೆ ರಸ್ತೆಗಳಲ್ಲಿ ಜಲಪ್ರವಾಹ ಉಂಟಾಗಿದೆ. ಮಂಗಳೂರು ನಗರದ ಹಲವು ಜನ ವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ರಸ್ತೆಗಳಲ್ಲಿ ನದಿಗಳ ಮಾದರಿಯಲ್ಲಿ ಭಾರೀ ಮಳೆ ನೀರು ಉಕ್ಕಿ ಬರುತ್ತಿದೆ. ಇಡೀ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ಹರಿದು ಮನೆಗಳಿಗೆ ನುಗ್ಗಿ ಹಾನಿಯಾಗಿದೆ. ಪಂಪ್ವೆಲ್ ಫ್ಲೈಓವರ್ ಕೆಳಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಮಂಗಳೂರು, ಮೇ 26: ಈ ವರ್ಷದ ಮೊದಲ ಮುಂಗಾರು ಮಳೆಗೇ ಮಂಗಳೂರು ನಗರದ ಪಂಪ್ವೆಲ್ ಫ್ಲೈಓವರ್ ಕೆಳಭಾಗ ಎರಡನೇ ಬಾರಿ ಜಲಾವೃತವಾಗಿದೆ. ನಿರಂತರ ಮಳೆಯ ಕಾರಣ ರಾಜಕಾಲುವೆ ತುಂಬಿ ಹರಿದಿದ್ದು, ಪಂಪ್ವೆಲ್​ನಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಪರಿಣಾಮವಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಎರಡು ಗಂಟೆಯಿಂದ ನಿರಂತರವಾಗಿ ಸುರಿದ ಭಾರೀ ಮಳೆಯಿಂದ ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತಗೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More