AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ

ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: May 19, 2026 | 8:27 AM

Share

ಮಂಗಳೂರಿನ ಕಾವೂರು ಪ್ರದೇಶದಲ್ಲಿರುವ ಮೂರು ಬಾವಿಗಳ ನೀರು ಡೀಸೆಲ್‌ನಿಂದ ಕಲುಷಿತಗೊಂಡಿದೆ. ಬಾವಿ ನೀರಿನಲ್ಲಿ ಶೇ 28ರಷ್ಟು ಡೀಸೆಲ್ ಅಂಶ ಪತ್ತೆಯಾಗಿದ್ದು, ಇದು ಕುಡಿಯಲು ಅನರ್ಹ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ. ಬಾವಿಯ ನೀರನ್ನು ಖಾಲಿ ಮಾಡಿದರೂ ಡೀಸೆಲ್ ಪದರ ಮತ್ತೆ ಬರುತ್ತಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.

ಮಂಗಳೂರು, ಮೇ 19: ಮಂಗಳೂರಿನ ಕಾವೂರು ಪ್ರದೇಶದಲ್ಲಿರುವ ಮೂರು ಮನೆಗಳ ಬಾವಿ ನೀರು ಡೀಸೆಲ್‌ನಿಂದ ಕಲುಷಿತಗೊಂಡಿರುವುದು ಪತ್ತೆಯಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ನವೆಂಬರ್ ತಿಂಗಳಿನಿಂದ ಈ ಸಮಸ್ಯೆ ಗಮನಕ್ಕೆ ಬಂದಿದ್ದು, ಬಾವಿಯ ನೀರನ್ನು ಖಾಲಿ ಮಾಡಿದರೂ ಡೀಸೆಲ್ ಪದರ ಮತ್ತೆ ಉಕ್ಕಿ ಬರುತ್ತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯು ಬಾವಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ, ನೀರು ಕುಡಿಯಲು ಅನರ್ಹವೆಂದು ವರದಿ ನೀಡಿದೆ. ಒಂದು ಬಾವಿಯ ನೀರಿನಲ್ಲಿ ಶೇ 28ರಷ್ಟು ಡೀಸೆಲ್ ಅಂಶ ಪತ್ತೆಯಾಗಿದೆ. ನೀರಿನಲ್ಲಿ ಕಾಗದವನ್ನು ಅದ್ದಿ ಬೆಂಕಿ ಹಚ್ಚಿದಾಗ ಅದು ಉರಿಯುತ್ತಿರುವುದು ಡೀಸೆಲ್ ಅಂಶದ ಇರುವಿಕೆಯನ್ನು ದೃಢಪಡಿಸಿದೆ. ಕುಡಿಯುವ ನೀರಿಗಾಗಿ ಬಾವಿಯನ್ನೇ ಅವಲಂಬಿಸಿದ್ದ ಜನರು ಈಗ ಕಾರ್ಪೊರೇಷನ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಈ ಸಮಸ್ಯೆಯ ಮೂಲವನ್ನು ಪತ್ತೆಹಚ್ಚಲು ಮತ್ತು ಶಾಶ್ವತ ಪರಿಹಾರ ಒದಗಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗಮನ ಹರಿಸಬೇಕೆಂದು ಸಂತ್ರಸ್ತರು ಮನವಿ ಮಾಡಿದ್ದಾರೆ.

ವಿವರಗಳಿಗೆ ಓದಿ: ಮಂಗಳೂರಿನಲ್ಲಿ ಮಹಾ ಅಚ್ಚರಿ: ಬಾವಿಗಳಲ್ಲಿ ಉಕ್ಕಿ ಬಂತು ಡೀಸೆಲ್, ನೀರು ಕುಡಿಯಲಾಗದೆ ಕಾವೂರು ನಿವಾಸಿಗಳು ಕಂಗಾಲು!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More