AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಭಿನ್ನ ಸನ್ನಿವೇಶಕ್ಕೆ ಸಾಕ್ಷಿಯಾದ ಬಂಟ್ವಾಳ: ಒಂದಡೆ ಉದ್ವಿಗ್ನ, ಮತ್ತೊಂದಡೆ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು

ವಿಭಿನ್ನ ಸನ್ನಿವೇಶಕ್ಕೆ ಸಾಕ್ಷಿಯಾದ ಬಂಟ್ವಾಳ: ಒಂದಡೆ ಉದ್ವಿಗ್ನ, ಮತ್ತೊಂದಡೆ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ವಿವೇಕ ಬಿರಾದಾರ|

Updated on:Sep 16, 2024 | 1:25 PM

Share

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೋಮುಸೌಹಾರ್ದತೆಗೆ ಸಾಕ್ಷಿಯಾಗಿದೆ. ಒಂದು ಕಡೆ ಬಂಟ್ವಾಳ ತಾಲೂಕಿ ಬಿಸಿ ರೋಡ್​​ನಲ್ಲಿ ಹಿಂದೂ-ಮುಸ್ಲಿಂರ ಹೇಳಿಕೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ ಹಂಚಿದ್ದಾರೆ.

ಮಂಗಳೂರು, ಸೆಪ್ಟೆಂಬರ್​​ 16: ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬಂಟ್ವಾಳ (Bantwal) ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಒಂದು ಕಡೆ ಬಂಟ್ವಾಳ ತಾಲೂಕಿ ಬಿಸಿ ರೋಡ್ (BC Road) ​ನಲ್ಲಿ ಹಿಂದೂ-ಮುಸ್ಲಿಮರ ಹೇಳಿಕೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ, ಐಸ್​​ಕ್ರೀಂ, ನೀರಿನ ಬಾಟಲಿ ವಿತರಣೆ ಮಾಡಿ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.

ಮಾಣಿ ಜಂಕ್ಷನ್​​ನಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಕೇಸರಿ ಶಾಲು‌ ಹಾಕಿಕೊಂಡು ಹಿಂದೂ ಯುವಕರು ಮುಸ್ಲಿಂ ಮುಖಂಡರು ಮತ್ತು ಮಕ್ಕಳಿಗೆ ಸಿಹಿ, ಐಸ್​ಕ್ರೀಂ, ನೀರಿನ ಬಾಟಲ್ ವಿತರಣೆ ಮಾಡಿದರು. ಈ ಮಾಣಿ ಜಂಕ್ಷನ್​ನಲ್ಲಿ ಬಿಸಿ ರೋಡ್​ ಕೇವಲ 20 ಕಿಮೀ ದೂರದಲ್ಲಿದೆ.

ಕೊಡಾಜೆಯಲ್ಲೂ ಕೂಡ ಹಿಂದೂಗಳು ಈದ್​ ಮಿಲಾದ್​ ಮೆರವಣಿಗೆಯಲ್ಲಿದ್ದ ಮುಸ್ಲಿಮರಿಗೆ ಸಿಹಿ ಹಂಚಿದರು. ಜುಮ್ಮಾ ಮಸೀದಿಯಿಂದ ಬಂದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸ್ವೀಟ್ ಬಾಕ್ಸ್ ವಿತರಿಸಿ ಹಬ್ಬದ ಶುಭಾಶಯ ಕೋರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Sep 16, 2024 01:22 PM

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More