ಹಗಲು ರಾತ್ರಿಯೆನ್ನದೆ ಬ್ಲಾಸ್ಟಿಂಗ್! ದಶಕಗಳ ಅಕ್ರಮ ಗಣಿಗಾರಿಕೆಗೆ ಹೈರಾಣಾದ ಜನ

Edited By:

Updated on: Feb 25, 2026 | 11:09 AM

ಮಂಗಳೂರಿನ ಪಲ್ಲಮಜಲು ಬಿ.ಮೂಡ ಗ್ರಾಮದಲ್ಲಿ ಕಳೆದ 17 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಗಲು-ರಾತ್ರಿ ನಡೆಯುವ ಬ್ಲಾಸ್ಟಿಂಗ್‌ನಿಂದ ನೂರಾರು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸರ್ಕಾರಿ ಶಾಲೆ, ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಕಟ್ಟಡಗಳಿಗೂ ಹಾನಿಯಾಗಿದೆ. ಸ್ಫೋಟದಿಂದ ಮತ್ತು ಭಾರೀ ಪ್ರಮಾಣದ ವಾಹನಗಳ ಓಡಾಟದಿಂದ ಜನರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿವೆ. ಗಣಿಗಾರಿಕೆ ಪ್ರದೇಶದಲ್ಲಿ ನೀರು ಸಂಗ್ರಹವಾಗಿ ಮಳೆಗಾಲದಲ್ಲಿ ಗ್ರಾಮಕ್ಕೆ ಪ್ರವಾಹದಂತೆಯೇ ನುಗ್ಗುತ್ತಿದೆ. ಹಲವು ಬಾರಿ ದೂರು ನೀಡಿದರೂ ಕ್ರಮ ಕೈಗೊಳ್ಳಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜಿಲ್ಲಾಡಳಿತ ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

ಮಂಗಳೂರು, ಫೆಬ್ರವರಿ 25: ಮಂಗಳೂರಿನ ಪಲ್ಲಮಜಲು ಬಿ.ಮೂಡ ಗ್ರಾಮದಲ್ಲಿ ಕಳೆದ 17 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಗಲು-ರಾತ್ರಿ ನಡೆಯುವ ಬ್ಲಾಸ್ಟಿಂಗ್‌ನಿಂದ ನೂರಾರು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸರ್ಕಾರಿ ಶಾಲೆ, ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಕಟ್ಟಡಗಳಿಗೂ ಹಾನಿಯಾಗಿದೆ. ಸ್ಫೋಟದಿಂದ ಮತ್ತು ಭಾರೀ ಪ್ರಮಾಣದ ವಾಹನಗಳ ಓಡಾಟದಿಂದ ಜನರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿವೆ. ಗಣಿಗಾರಿಕೆ ಪ್ರದೇಶದಲ್ಲಿ ನೀರು ಸಂಗ್ರಹವಾಗಿ ಮಳೆಗಾಲದಲ್ಲಿ ಗ್ರಾಮಕ್ಕೆ ಪ್ರವಾಹದಂತೆಯೇ ನುಗ್ಗುತ್ತಿದೆ. ಹಲವು ಬಾರಿ ದೂರು ನೀಡಿದರೂ ಕ್ರಮ ಕೈಗೊಳ್ಳಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜಿಲ್ಲಾಡಳಿತ ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More