ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ ಕೇಸ್​​ನಲ್ಲಿ SDPI ಕೈವಾಡ, ಲವ್​​ ಜಿಹಾದ್​ ಆರೋಪ

Edited By:

Updated on: Feb 12, 2026 | 3:22 PM

ಸುರತ್ಕಲ್‌ನ ಹಿಂದೂ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ, ಯುವತಿಯ ತಂದೆ ವಿಶ್ವನಾಥ್ ಲವ್ ಜಿಹಾದ್ ಆರೋಪ ಮಾಡಿದ್ದಾರೆ. SDPI ಸಂಘಟನೆಯ ಕೈವಾಡವಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಗಳು ವಾಪಸ್ ಬರಬೇಕೆಂದು ಮನವಿ ಮಾಡಿದ್ದು, ಪೊಲೀಸ್ ತನಿಖೆಗೂ ಒತ್ತಾಯಿಸಿದ್ದಾರೆ. 

ಮಂಗಳೂರು, ಫೆಬ್ರವರಿ 12: ಸುರತ್ಕಲ್‌ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಆರೋಪಿಸಿದ್ದಾರೆ. ತಮ್ಮ ಮಗಳು ವೈಶಾಲಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ SDPI ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಮಗಳೊಂದಿಗೆ ಪರಾರಿಯಾದ ಯುವಕ ಮೊಹಮ್ಮದ್ ಮಿದ್ಲಾಜ್ SDPI ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆ ಯುವಕ ಕೆಲಸ ಮಾಡುತ್ತಿದ್ದ ಅಟ್ಲಾಂಟಿಕ್ ಜುವೆಲ್ಲರ್ಸ್ ಮಾಲೀಕರು SDPI ಮುಖಂಡರು ಎಂದು ತಿಳಿದುಬಂದಿದೆ. ಮಿದ್ಲಾಜ್ ಪರವಾಗಿ ಹಲವರು ವಯನಾಡು ಪೊಲೀಸ್ ಠಾಣೆಗೆ ಬಂದವರು ಕೂಡ ಅದೇ ಸಂಘಟನೆಗೆ ಸೇರಿದವರು ಎಂದು ದೂರಲಾಗಿದೆ. ಮಗಳು ಯಾವುದೇ ಮಾದಕ ವ್ಯಸನ ಅಥವಾ ಬ್ರೈನ್ ವಾಶ್‌ಗೆ ಒಳಗಾಗಿದ್ದಳೇ ಎಂಬುದು ತಮಗೆ ನಿಖರವಾಗಿ ತಿಳಿದಿಲ್ಲ. ಆದರೆ ಆಕೆ ಸುರಕ್ಷಿತವಾಗಿ ಮನೆಗೆ ಮರಳಬೇಕು. ಈ ಬಗ್ಗೆ ಪೊಲೀಸ್​​ ತನಿಖೆ ಆಗಬೇಕು ಎಂದು ವಿಶ್ವನಾಥ್​ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 12, 2026 03:19 PM
Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More