AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಮೋಹನ್ ದಾಸ್ ಕೆಂಡಾಮಂಡಲ

ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಮೋಹನ್ ದಾಸ್ ಕೆಂಡಾಮಂಡಲ

ಗಂಗಾಧರ​ ಬ. ಸಾಬೋಜಿ
|

Updated on: Feb 19, 2026 | 5:02 PM

Share

ಮಂಗಳೂರಿಗೆ ಕೋಮುವಾದ ಕಾರಣಕ್ಕೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನ್ ದಾಸ್ ಪೈ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಅನಗತ್ಯ ಹಾಗೂ ನಾಚಿಕೆಗೇಡಿನ ಸಂಗತಿ ಎಂದಿರುವ ಪೈ, ಖರ್ಗೆಯೇ ಇತ್ತೀಚೆಗೆ ಮಂಗಳೂರಿನಲ್ಲಿ ಕಂಡ ಭಾರಿ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಯನ್ನು ನೆನಪಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 19: ಕೋಮುವಾದ ಕಾರಣಕ್ಕೆ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿಚಾರವಾಗಿ ಉದ್ಯಮಿ ಮೋಹನ್ ದಾಸ್ ಪೈ ಕೂಡ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿರುವ ಮೋಹನ್ ದಾಸ್ ಪೈ, ಇದು ಅತ್ಯಂತ ನಾಚಿಕೇಡಿನ ಹಾಗೂ ಅನಗತ್ಯ ಎಂದು ಹೇಳಿದ್ದಾರೆ. ಇನ್ನು ಇತ್ತೀಚೆಗೆ ಐಟಿ ಸಚಿವರು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಭಾರೀ ಪ್ರಮಾಣದ ಹೂಡಿಕೆಗಳು ಆಗುತ್ತಿರುವುದು, ಉದ್ಯೋಗಗಳು ಸೃಷ್ಟಿಯಾಗುತ್ತಿರುವುದು ಮತ್ತು ಅನೇಕರು ಮಂಗಳೂರಿನ ಅಭಿವೃದ್ಧಿಗಾಗಿ ಬಹಳ ಕಷ್ಟಪಡುತ್ತಿರುವುದನ್ನು ಅವರು ನೋಡಿದ್ದರು. ಅಂತಹ ಸಂದರ್ಭದಲ್ಲಿ ಅವರು ಈ ರೀತಿಯ ಹೇಳಿಕೆ ನೀಡಿರುವುದು ಅತ್ಯಂತ ನಾಚಿಕೇಡು ಮತ್ತು ಅನಗತ್ಯ ಎಂದು ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More