Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ, ತಾತ್ಕಾಲಿಕವಾಗಿ ಮುಚ್ಚಲು ಪಿಐಎಲ್

ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ, ತಾತ್ಕಾಲಿಕವಾಗಿ ಮುಚ್ಚಲು ಪಿಐಎಲ್

ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma

Updated on:Mar 28, 2025 | 2:56 PM

ದೇಶದ ಪ್ರಮುಖ ಮೃಗಾಲಯಗಳಲ್ಲಿ ಒಂದಾಗಿರುವ ಮಂಗಳೂರಿನ ಪ್ರಸಿದ್ಧ ಪಿಲಿಕುಳ ಝೂನಲ್ಲಿ ಭಾರಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಗಂಭೀರ ಆರೋಪ ಮಾಡಿದ್ದು, ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿ, ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಬೇಕು ಮತ್ತು ಮುಂದೆ ಅರಣ್ಯ ಇಲಾಖೆ ಅಧೀನಕ್ಕೆ ವಹಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಮಂಗಳೂರು, ಮಾರ್ಚ್ 28: ಮಂಗಳೂರಿನ ಪ್ರಸಿದ್ಧ ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಹೈಕೋರ್ಟ್ ಮೆಟ್ಟಿಲೇರಿ ಸಾರ್ವಜನಿಕ ‌ಹಿತಾಸಕ್ತಿ ದಾವೆ ಹೂಡಿದ್ದು, ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಬೇಕು ಎಂದು ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಭುವನ್ ಜೊತೆ ನಮ್ಮ ಪ್ರತಿನಿಧಿ ಅಶೋಕ್ ನಡೆಸಿರುವ ಮಾತುಕತೆಯ ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 28, 2025 10:21 AM