AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಕಿರುಕುಳಕ್ಕೆ ಬೇಸತ್ತು ರಾಜಸ್ಥಾನದಿಂದ ಮಂಗಳೂರಿಗೆ ಬಂದಿದ್ದ ಮಹಿಳೆ ರಕ್ಷಣೆ: ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ

ಪತಿ ಕಿರುಕುಳಕ್ಕೆ ಬೇಸತ್ತು ರಾಜಸ್ಥಾನದಿಂದ ಮಂಗಳೂರಿಗೆ ಬಂದಿದ್ದ ಮಹಿಳೆ ರಕ್ಷಣೆ: ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jul 30, 2026 | 7:29 AM

Share

ಪತಿಯ ಕಿರುಕುಳದಿಂದ ರಾಜಸ್ಥಾನದಿಂದ ಮಂಗಳೂರಿಗೆ ಬಂದ ಮಹಿಳೆಯನ್ನು ಪಾಂಡೇಶ್ವರ ಪೊಲೀಸರು ರಕ್ಷಿಸಿ, ಎನ್‌ಜಿಒ ಸಂಸ್ಥೆಯ ಆಶ್ರಯದಲ್ಲಿ ಕೌನ್ಸೆಲಿಂಗ್‌ಗೆ ವ್ಯವಸ್ಥೆ ಮಾಡಿದರು. ಮಾನಸಿಕವಾಗಿ ಕುಗ್ಗಿದ್ದ ಮಹಿಳೆಗೆ ಎನ್‌ಜಿಒ ಬೆಂಬಲ ನೀಡಿ, ಆಕೆಯ ತಂದೆಯನ್ನು ಸಂಪರ್ಕಿಸಿ ಮಂಗಳೂರಿಗೆ ಕರೆಸಿತು. ಕಷ್ಟದಲ್ಲಿದ್ದ ಮಗಳನ್ನು ಕಂಡ ತಂದೆ, ಮತ್ತು ತಂದೆಯನ್ನು ಸೇರಿದ ಮಗಳ ಭಾವುಕ ಮರುಮಿಲನಕ್ಕೆ ಎನ್‌ಜಿಒ ಸಂಸ್ಥೆ ಸಾಕ್ಷಿಯಾಯಿತು.

ಮಂಗಳೂರು, ಜು.30: ಪತಿಯ ಸತತ ಕಿರುಕುಳ ತಾಳಲಾರದೆ ದೂರದ ರಾಜಸ್ಥಾನದಿಂದ ಕರಾವಳಿಯ ಮಂಗಳೂರಿಗೆ ಬಂದು ದಿಕ್ಕು ಕಾಣದೆ ಒಂಟಿಯಾಗಿ ಅಲೆಯುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಆಕೆಯ ತಂದೆಯ ವಶಕ್ಕೆ ಒಪ್ಪಿಸುವಲ್ಲಿ ಪಾಂಡೇಶ್ವರ ಪೊಲೀಸರು ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆ (NGO) ಯಶಸ್ವಿಯಾಗಿವೆ. ರಾಜಸ್ಥಾನದಲ್ಲಿ ಪತಿಯಿಂದ ತೀವ್ರ ಕಿರುಕುಳ ಅನುಭವಿಸುತ್ತಿದ್ದ ಗೋಪಿ, ಮಾನಸಿಕವಾಗಿ ಜರ್ಜರಿತರಾಗಿ ಮನೆ ತೊರೆದು ಜೂನ್ 26ರಂದು ಮಂಗಳೂರಿಗೆ ಬಂದಿಳಿದಿದ್ದರು. ನಗರದ ಬೀದಿಗಳಲ್ಲಿ ದಿಕ್ಕು ತೋಚದೆ ಒಂಟಿಯಾಗಿ ತಿರುಗಾಡುತ್ತಿದ್ದರು. ಜೂನ್ 26ರಂದು ನಗರದಲ್ಲಿ ಒಂಟಿಯಾಗಿ ಅನುಮಾನಾಸ್ಪದ ಹಾಗೂ ಸಂಕಷ್ಟದ ಸ್ಥಿತಿಯಲ್ಲಿ ಓಡಾಡುತ್ತಿದ್ದ ಈಕೆಯನ್ನು ಗಮನಿಸಿದ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಆಕೆಯನ್ನು ರಕ್ಷಿಸಿದ್ದರು. ರಕ್ಷಿಸಲ್ಪಟ್ಟ ಮಹಿಳೆಯನ್ನು ಸುರಕ್ಷತೆಯ ದೃಷ್ಟಿಯಿಂದ ಮಂಗಳೂರಿನ ಸ್ವಯಂಸೇವಾ ಸಂಸ್ಥೆಯೊಂದರಲ್ಲಿ (NGO) ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಆಕೆಗೆ ಸೂಕ್ತ ಆರೈಕೆ ಹಾಗೂ ಕೌನ್ಸೆಲಿಂಗ್ ನೀಡಲಾಯಿತು.

ಮಹಿಳೆಯಿಂದ ಮಾಹಿತಿ ಕಲೆಹಾಕಿದ ಎನ್‌ಜಿಒ ಸಂಸ್ಥೆಯ ಪದಾಧಿಕಾರಿಗಳು, ರಾಜಸ್ಥಾನದಲ್ಲಿದ್ದ ಆಕೆಯ ತಂದೆಯನ್ನು ಸಂಪರ್ಕಿಸಿ ವಿಷಯ ತಿಳಿಸಿದರು. ಸುದ್ದಿ ತಿಳಿಯುತ್ತಿದ್ದಂತೆಯೇ ಮಂಗಳೂರಿಗೆ ಧಾವಿಸಿ ಬಂದ ತಂದೆಗೆ ಸಂಸ್ಥೆಯು ಮಗಳನ್ನು ಸುರಕ್ಷಿತವಾಗಿ ಹಸ್ತಾಂತರಿಸಿದೆ. ದೀರ್ಘಕಾಲದ ನಂತರ ಕಷ್ಟದಲ್ಲಿದ್ದ ಮಗಳನ್ನು ಕಂಡ ತಂದೆ ಹಾಗೂ ತಂದೆಯನ್ನು ಅಪ್ಪಿಕೊಂಡ ಮಗಳ ಭಾವುಕ ಕ್ಷಣಕ್ಕೆ ಮಂಗಳೂರಿನ ಎನ್‌ಜಿಒ ಸಂಸ್ಥೆ ಸಾಕ್ಷಿಯಾಯಿತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 30, 2026 07:29 AM

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More