ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ

Edited By:

Updated on: May 01, 2025 | 11:34 PM

ಮಂಗಳೂರಿನ ಬಜಪೆಯ ಕಿನ್ನಿಪದವು ಬಳಿ ಹಿಂದೂ (Hindu) ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಸುಹಾಸ್ ಶೆಟ್ಟಿ ಕೊಲೆಯಾದ ಕಾರ್ಯಕರ್ತ. ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಂಗಳೂರು ಪೊಲೀಸ್​ ಕಮಿಷನರ್​ ಅನುಪಮ್​ ಅಗರ್ವಾಲ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಮಂಗಳೂರು ಪೊಲೀಸ್ ಆಯುಕ್ತ ಸ್ಫೋಟಕ ಅಂಶ ಬಿಚ್ಚಿಟ್ಟಿದ್ದಾರೆ.

ಮಂಗಳೂರು, (ಮೇ 01):  ಮಂಗಳೂರಿನ ಬಜಪೆಯ ಕಿನ್ನಿಪದವು ಬಳಿ ಹಿಂದೂ (Hindu) ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಸುಹಾಸ್ ಶೆಟ್ಟಿ ಕೊಲೆಯಾದ ಕಾರ್ಯಕರ್ತ. ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ.

ಇನ್ನು ಈ ಬಗ್ಗೆ ಮಂಗಳೂರು ಪೊಲೀಸ್​ ಕಮಿಷನರ್​ ಅನುಪಮ್​ ಅಗರ್ವಾಲ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಇನೋವಾ ಕಾರಿನಲ್ಲಿ ಸಹಚರರ ಜೊತೆ ತೆರಳುತ್ತಿದ್ದ ಸುಹಾಸ್​ ಕಾರು ಅಡ್ಡಗಟ್ಟಿ ತಲ್ವಾರ್​​​ಗಳಿಂದ ಹಲ್ಲೆ ಮಾಡಿದ್ದಾರೆ. ಗೂಡ್ಸ್​ ವಾಹನ, ಕಾರಿನಲ್ಲಿ ಬಂದು ಸುಹಾಸ್​ ಹತ್ಯೆಗೈದಿದ್ದಾರೆ. ಸುಹಾಸ್​ ಶೆಟ್ಟಿಯನ್ನೇ ಟಾರ್ಗೆಟ್​ ಮಾಡಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಬಜ್ಪೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಲಾಗಿದ್ದು, ಆರೋಪಿಗಳ ಪತ್ತೆಗಾಗಿ ತಂಡ ರಚಿಸುತ್ತೇವೆ. ಇನ್ನು ಪೊಲೀಸ್​ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಮಂಗಳೂರು ನಗರದಲ್ಲಿ ಹೆಚ್ಚಿನ ಬಂದೋಬಸ್ತ್​ ಕಲ್ಪಿಸಲಾಗುತ್ತೆ. ಇದು ಪ್ರತೀಕಾರದ ಹತ್ಯೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ತಿಳಿಸಿದರು.

Published on: May 01, 2025 11:26 PM
Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More