ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್ ಬಿಚ್ಚಿಟ್ಟ ಮಂಗಳೂರು ಕಮಿಷನರ್
ಬಜಪೆಯ ಕಿನ್ನಿಪದವು ಬಳಿ ಮತ್ತೋರ್ವ ಹಿಂದೂ (Hindu) ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ. ಸುಹಾಸ್ ಶೆಟ್ಟಿ ಕೊಲೆಯಾದ ಕಾರ್ಯಕರ್ತ. ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ಇಂದು(ಮೇ 01) ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ. ಈ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸಹಾಸ್ ಶೆಟ್ಟಿ ಹತ್ಯೆಯ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಮಂಗಳೂರು, (ಮೇ 01): ಬಜಪೆಯ ಕಿನ್ನಿಪದವು ಬಳಿ ಮತ್ತೋರ್ವ ಹಿಂದೂ (Hindu) ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ. ಸುಹಾಸ್ ಶೆಟ್ಟಿ ಕೊಲೆಯಾದ ಕಾರ್ಯಕರ್ತ. ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ಇಂದು(ಮೇ 01) ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ. ಈ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸಹಾಸ್ ಶೆಟ್ಟಿ ಹತ್ಯೆಯ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಸುಹಾಸ್ ಇನೋವಾ ಕಾರಿನಲ್ಲಿ ಸಹಚರರ ಜೊತೆ ತೆರಳುತ್ತಿದ್ದ. ಆ ವೇಳೆ ಗೂಡ್ಸ್ ವಾಹನ, ಕಾರಿನಲ್ಲಿ ಬಂದು ಸುಹಾಸ್ ಕಾರು ಅಡ್ಡಗಟ್ಟಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಸುಹಾಸ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿತ್ತಾದೂರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಸುಹಾಸ್ ಶೆಟ್ಟಿಯನ್ನೇ ಟಾರ್ಗೆಟ್ ಮಾಡಿ ಕೊಲೆ ಮಾಡಿದ್ದಾರೆ ಎಂದು ತಿಳಿಸಿದರು.
Loading...
Unable to load recommendations.
Follow Us