ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ

Edited By:

Updated on: May 31, 2025 | 10:42 PM

ಮಂಗಳೂರಿನಲ್ಲಿ ಹೊಸದಾಗಿ ನೇಮಕಗೊಂಡ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕೊಲೆಯಂತಹ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಮತ್ತು ಅಂತಹ ಆರೋಪಿ ವ್ಯಕ್ತಿಗಳನ್ನು ಬೆಂಬಲಿಸುವ ಅಥವಾ ಆಶ್ರಯ ನೀಡುವವರಿಗೆ ಬಲವಾದ ಎಚ್ಚರಿಕೆ ನೀಡಿದ್ದಾರೆ. ಕೊಲೆ ಅಥವಾ ಅಪರಾಧ ಮಾಡಿದ ಆರೋಪಿಗೆ ಆಶ್ರಯ, ಆಹಾರ, ತಪ್ಪಿಸಿಕೊಳ್ಳಲು ವಾಹನ, ಹಣ ಅಥವಾ ಸಂವಹನ ನಡೆಸಲು ಫೋನ್ ನೀಡುವ ಮೂಲಕ ಸಹಾಯ ಮಾಡುವವರನ್ನು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಆರೋಪಿ ಎಂದು ಪರಿಗಣಿಸಲಾಗುತ್ತದೆ ಎಂದು ಸುಧೀರ್ ರೆಡ್ಡಿ ಹೇಳಿದ್ದಾರೆ.

ಮಂಗಳೂರು, ಮೇ 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ, ಕೊಲೆ ಪ್ರಕರಣಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ (Sudheer Kumar Reddy) ಖಡಕ್ ವಾರ್ನಿಂಗ್ ನೀಡಿದ್ದಾರೆ. ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ‌ ನೀಡಿದ್ದಾರೆ. ಎಲ್ಲಾ ಆರೋಪಿಗಳಿಗೆ ಮತ್ತು ಆರೋಪಿಗಳಿಗೆ ಸಹಕಾರ ಮಾಡುವ ಎಲ್ಲರಿಗೂ ಇದು ಎಚ್ಚರಿಕೆ‌. ಎಲ್ಲಾ ದೊಡ್ಡವರಿಗೆ, ಆರೋಪಿಗಳ ಮನೆಯಲ್ಲಿರುವವರು, ಗೆಳೆಯರು, ಸಂಬಂಧಿಕರಿಗೆ, ಸಮಾಜದಲ್ಲಿ ಚೆನ್ನಾಗಿದ್ದು ಆರೋಪಿಗಳಿಗೆ ಸಹಾಯ ಮಾಡುವವರಿಗೆ‌ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಅಪರಾಧ ಮಾಡಿದ ಆರೋಪಿ ನಿಮ್ಮ ಮನೆಯಲ್ಲಿದ್ದರೂ ಅವರಿಗೆ ಆಶ್ರಯ, ಕಾರು, ದುಡ್ಡು, ಫೋನ್ ಕೊಡೋದು ಅಪರಾಧ. ಯಾವ ಊರಲ್ಲಿ ಏನು ಹೇಳುತ್ತಾರೋ ಗೊತ್ತಿಲ್ಲ, ಆದರೆ ನಾವು ಮಾತ್ರ ಅವನನ್ನು ಆರೋಪಿ ಅಂತಾನೆ ಹೇಳುತ್ತೇವೆ. ನಮ್ಮ ಬಿಎನ್ ಎಸ್ ಅಡಿಯಲ್ಲಿ ಅದು ಕೂಡ ಒಂದು ಅಪರಾಧ ಎಂದು ಸುಧೀರ್ ರೆಡ್ಡಿ ಹೇಳಿದ್ದಾರೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More