ಮಂಗಳೂರು: ಅತ್ತಾವರದಲ್ಲಿ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ನಜ್ಜುಗುಜ್ಜು!

Edited By:

Updated on: Apr 22, 2026 | 12:04 PM

ಮಂಗಳೂರಿನ ಅತ್ತಾವರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ವಾಹನಗಳ ಮೇಲೆ ಬಿದ್ದಿದೆ. ಪಾರ್ಕಿಂಗ್ ಸ್ಥಳವಿಲ್ಲದೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ನಷ್ಟಕ್ಕೆ ಯಾರು ಹೊಣೆ ಎಂದು ಮಾಲೀಕರು ಪ್ರಶ್ನಿಸಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ ನೋಡಿ.

ಮಂಗಳೂರು, ಏಪ್ರಿಲ್ 22: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆ ಕೆಲವೆಡೆ ಅವಾಂತರ ಸೃಷ್ಟಿಸಿದೆ. ಮಂಗಳೂರಿನ ಅತ್ತಾವರದಲ್ಲಿ ವರ್ಷದ ಹಿಂದೆಯಷ್ಟೇ ನಿರ್ಮಿಸಲಾಗಿದ್ದ ಕಾಂಪೌಂಡ್ ಗೋಡೆಯೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಗೋಡೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಗೋಡೆಯ ಅವಶೇಷಗಳಡಿ ಸಿಲುಕಿ ಸಂಪೂರ್ಣ ಜಖಂಗೊಂಡಿವೆ. ಸ್ಥಳೀಯವಾಗಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬಂದಿದ್ದವು. ಪಾರ್ಕಿಂಗ್‌ಗೆ ಜಾಗವಿಲ್ಲದ ಕಾರಣ ಕಾರು ಮಾಲೀಕರು ಅನಿವಾರ್ಯವಾಗಿ ಗೋಡೆಯ ಪಕ್ಕದಲ್ಲಿ ವಾಹನಗಳನ್ನು ನಿಲ್ಲಿಸಿದ್ದರು. ಆದರೆ, ಮಳೆಯ ತೀವ್ರತೆಗೆ ಗೋಡೆ ಕುಸಿತಗೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಕಾರುಗಳು ಹಾನಿಗೊಳಗಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More