ಮಂಗಳೂರಿನ ತಲಪಾಡಿಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿತ; ಸ್ಥಳಕ್ಕೆ ಸ್ಪೀಕರ್ ಯುಟಿ ಖಾದರ್ ಭೇಟಿ

Edited By:

Updated on: Dec 03, 2024 | 6:26 PM

ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಹಲವೆಡೆ ಭೂಕುಸಿತವಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ‌ ಗ್ರಾಮದ ಪಿಲಿಕೂರು‌ ಎಂಬಲ್ಲಿ ಮೊಯ್ದಿನ್ ಎಂಬುವವರ ಮನೆಯ ಪಕ್ಕ ನಿರ್ಮಿಸಿದ್ದ ತಡೆಗೋಡೆ ಕುಸಿದು ತಡೆಗೋಡೆಯ ಕೆಳ ಭಾಗದಲ್ಲಿರುವ ಯಾಸೀನ್ ಬೇಗ್ ಅವರ ಮನೆ ಮೇಲೆ ಬಿದ್ದಿತ್ತು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ‌ ಗ್ರಾಮದಲ್ಲಿ ಮನೆ ಮೇಲೆ ಬೃಹತ್ ತಡೆಗೋಡೆ ಕುಸಿತವಾದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿದ್ದಾರೆ. ಉಳ್ಳಾಲ ಕ್ಷೇತ್ರದ ಶಾಸಕರಾಗಿರುವ ಯು.ಟಿ ಖಾದರ್ ಮನೆಯವರು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ತಡೆಗೋಡೆ ಕಟ್ಟಿಕೊಡುವ ಭರವಸೆ ನೀಡಿದ್ದಾರೆ. ಯಾಸೀನ್ ಬೇಗ್ ಎಂಬುವವರ ಮನೆಯ ಮೇಲೆ ಕುಸಿದು ಬಿದ್ದಿದ್ದ ತಡೆಗೋಡೆಯಿಂದ ಮನೆಗೆ ಹಾನಿಯಾಗಿದ್ದರೂ ಕುಟುಂಬ ಜೀವಾಪಾಯದಿಂದ ಪಾರಾಗಿದೆ.

ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ‌ ಗ್ರಾಮದ ಪಿಲಿಕೂರು‌ ಎಂಬಲ್ಲಿ ಮೊಯ್ದಿನ್ ಎಂಬುವವರ ಮನೆಯ ಪಕ್ಕ ನಿರ್ಮಿಸಿದ್ದ ತಡೆಗೋಡೆ ಕುಸಿದು ತಡೆಗೋಡೆಯ ಕೆಳ ಭಾಗದಲ್ಲಿರುವ ಯಾಸೀನ್ ಬೇಗ್ ಅವರ ಮನೆ ಮೇಲೆ ಬಿದ್ದಿತ್ತು. ಮನೆಯೊಳಗಿದ್ದ ಯಾಸೀನ್ ಬೇಗ್ ಹಾಗೂ ಅವರ 5 ಮಂದಿ ಕುಟುಂಬ ಸದಸ್ಯರು ಶಬ್ದ ಕೇಳಿ ಹೊರ ಬಂದಾಗ ಘಟನೆ ಬೆಳಕಿಗೆ ಬಂದಿತ್ತು. ತಡೆಗೋಡೆ ಬಿದ್ದ ರಭಸಕ್ಕೆ ಮನೆಯು ಸದ್ಯ ಅಪಾಯ ಸ್ಥಿತಿಯಲ್ಲಿದೆ. ಅಪಾಯ ಇರುವ ಹಿನ್ನೆಲೆಯಲ್ಲಿ ಆ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More