Mangaluru Rains: ಮಂಗಳೂರು ಸೇರಿ ದಕ್ಷಿಣ ಕನ್ನಡದ ಹಲವೆಡೆ ತಂಪೆರೆದ ಮಳೆ

Mangaluru Rains: ಮಂಗಳೂರು ಸೇರಿ ದಕ್ಷಿಣ ಕನ್ನಡದ ಹಲವೆಡೆ ತಂಪೆರೆದ ಮಳೆ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Ganapathi Sharma

Updated on:Mar 22, 2024 | 11:23 AM

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ಬೆಳಗ್ಗೆ ಮಳೆಯಾಗಿದೆ. ಮಂಗಳೂರು ನಗರ, ಪುತ್ತೂರು, ಬಂಟ್ವಾಳ ಹಾಗೂ ಹಲವು ಪ್ರದೇಶಗಳಲ್ಲಿ ಬೆಳಗ್ಗೆ ಸುರಿದ ಮಳೆ ಬೇಸಿಗೆ ಬಿಸಿಲಿನಿಂದ ಕಾದಿದ್ದ ನೆಲಕ್ಕೆ ತುಸು ತಂಪೆರೆಯಿತು.

ಮಂಗಳೂರು, ಮಾರ್ಚ್ 22: ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರು (Mangaluru) ಮತ್ತು ಇತರ ಹಲವು ಕಡೆಗಳಲ್ಲಿ ಶುಕ್ರವಾರ ಬೆಳಿಗ್ಗೆ ಮಳೆಯ (Rain) ಸಿಂಚನವಾಯಿತು. ಮಂಗಳೂರು ನಗರದ ಕೆಲವೆಡೆ ಸಾಧಾರಣ ಮಳೆಯಾಗಿದೆ. ಉಳಿದಂತೆ ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿ ಜಿಲ್ಲೆಯ ಹಲವೆಡೆ ಮಳೆ ಸುರಿದಿದೆ. ಮಂಗಳೂರು ನಗರದಲ್ಲಿ ಗುಡುಗು ಸಿಡಿಲಿನ ಅಬ್ಬರವೂ ಇತ್ತು. ವರ್ಷದ ಮೊದಲ ಮಳೆ ಸುರಿದಿದ್ದದ್ದು, ಬಿಸಿಲ ಬೇಗೆಗೆ ಕಾದಿದ್ದ ನೆಲಕ್ಕೆ ತುಸು ತಂಪೆರೆಯಿತು.

ಬರಪೀಡಿತ ಮಂಗಳೂರು ನಗರ ಕೂಡ ಈ ವರ್ಷ ನೀರಿನ ಸಮಸ್ಯೆ ಎದುರಿಸುತ್ತಿದೆ. ನಗರಕ್ಕೆ ನೀರು ಪೂರೈಕೆಯ ಪ್ರಮುಖ ಮೂಲವಾಗಿರುವ ನೇತ್ರಾವತಿ ನದಿಯಲ್ಲಿ ಬೇಸಗೆಗೂ ಮುನ್ನವೇ ನೀರು ಕಡಿಮೆಯಾಗಿದೆ.

ಮತ್ತೊಂದೆಡೆ, ನೆರೆಯ ಕಾಸರಗೋಡು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಕೂಡ ಶುಕ್ರವಾರ ಮಳೆಯಾಗಿದೆ. ಕಾಸರಗೋಡು ನಗರದಲ್ಲಿ ಕೂಡ ಮಳೆಯಾಯೊತು. ಉಳಿದಂತೆ, ಜಿಲ್ಲೆಯ ಮದೂರು, ಕುಂಬ್ಳೆ ಸೇರಿ ಹಲವೆಡೆ ವರುಣನ ಸಿಂಚನವಾಯಿತು. ಹಲವೆಡೆ ಗುಡುಗು, ಸಿಡಿಲಿನ ಆರ್ಭಟ ಜೋರಾಗಿತ್ತು.

ಮೂರು ದಿನಗಳ ಕಾಲ ಮಳೆ ಸಾಧ್ಯತೆ

ಇಂದಿನಿಂದ ಮೂರು ದಿನ ಕಾಲ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಕಾಸರಗೋಡಿನ ಮನೆಯಲ್ಲಿ ಸಿಕ್ತು 2000 ಮುಖಬೆಲೆಯ ಬರೋಬ್ಬರಿ 7 ಕೋಟಿ ರೂ. ನಗದು!

ಮುಂದಿನ 4 ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಬಹುದು. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 22, 2024 10:22 AM