ದಿಗಂತ್ ನಾಪತ್ತೆ ಕೆಸ್ಗೆ ಬಿಗ್ ಟ್ವಿಸ್ಟ್: ಎಸ್ಪಿ ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಇಲ್ಲಿದೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಅವರ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಪೊಲೀಸರು 10 ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದು, ಅವರನ್ನು ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ. ಪೊಲೀಸ್ ಅಧಿಕಾರಿ ಯತೀಶ್ ಅವರು ಕಾರ್ಯಾಚರಣೆಯ ವಿವರಗಳನ್ನು ಬಿಚ್ಚಿಟ್ಟಿದ್ದಾರೆ.
ಮಂಗಳೂರು, ಮಾರ್ಚ್ 09: ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ (Bantwala) ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ, ವಿದ್ಯಾರ್ಥಿ ದಿಗಂತ್ (Diganth) ಪ್ರಕರಣ ಸುಖಾಂತ್ಯ ಕಂಡಿದೆ. ದಿಗಂತ್ ನಾಪತ್ತೆಯಾದ ದಿನದಿಂದ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು 10 ತಂಡಗಳನ್ನು ರಚಿಸಿಕೊಂಡು ಹುಡುಕಾಟ ನಡೆಸಿದ್ದರು. ದಿಗಂತ್ ಪತ್ತೆಯಾಗಿದ್ದ ಹೇಗೆ? ಪೊಲೀಸರು ನಡೆಸಿದ ಕಾರ್ಯಾಚರಣೆ ಹೇಗಿತ್ತು ಎಂಬುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.