ದಸರಾ ರಜೆಯ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆ: ಪೊಲೀಸರ ಜೀಪನ್ನೇ ಅಲುಗಾಡಿಸಿ ವಿದ್ಯಾರ್ಥಿನಿಯರ ಆಕ್ರೋಶ
ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ಸಮಯದಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಬೆಂಬಲ ಸೂಚಿಸಿದ್ದು, ಪರೀಕ್ಷೆ ಬಹಿಷ್ಕರಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಕಾನೂನು ಕೈಗೆ ತೆಗೆದುಕೊಳ್ಳದಂತೆ ಪೊಲೀಸರು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.
ಮಂಗಳೂರು, ಅಕ್ಟೋಬರ್ 12: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪೊಲೀಸರ ಜೀಪನ್ನೇ ತಳ್ಳಿ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂದೂರ್ವೆಲ್ ಬಳಿಯ ಸೈಂಟ್ ಆಗ್ನೆಸ್ ಕಾಲೇಜು ಗೇಟ್ ಎದುರು ಸೇರಿರುವ ವಿದ್ಯಾರ್ಥಿಗಳು, ಪರೀಕ್ಷೆಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಕಾರ್ಯಕರ್ತರು ಸಹ ಬೆಂಬಲ ಸೂಚಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 12, 2026 11:24 AM
Follow Us

