ದಸರಾ ರಜೆಯ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆ: ಪೊಲೀಸರ ಜೀಪನ್ನೇ ಅಲುಗಾಡಿಸಿ ವಿದ್ಯಾರ್ಥಿನಿಯರ ಆಕ್ರೋಶ

Edited By:

Updated on: Oct 12, 2026 | 11:25 AM

ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ಸಮಯದಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಬೆಂಬಲ ಸೂಚಿಸಿದ್ದು, ಪರೀಕ್ಷೆ ಬಹಿಷ್ಕರಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಕಾನೂನು ಕೈಗೆ ತೆಗೆದುಕೊಳ್ಳದಂತೆ ಪೊಲೀಸರು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.

ಮಂಗಳೂರು, ಅಕ್ಟೋಬರ್​​ 12: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪೊಲೀಸರ ಜೀಪನ್ನೇ ತಳ್ಳಿ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂದೂರ್​​ವೆಲ್ ಬಳಿಯ ಸೈಂಟ್ ಆಗ್ನೆಸ್ ಕಾಲೇಜು ಗೇಟ್ ಎದುರು ಸೇರಿರುವ ವಿದ್ಯಾರ್ಥಿಗಳು, ಪರೀಕ್ಷೆಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಕಾರ್ಯಕರ್ತರು ಸಹ ಬೆಂಬಲ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 12, 2026 11:24 AM
Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More