ತಲ್ವಾರ್ ದಾಳಿ ಮಾಡಿ ಓಡ್ತಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದಿದ್ಹೇಗೆ ನೋಡಿ! ಇಲ್ಲಿದೆ ವಿಡಿಯೋ
ಮಂಗಳೂರಿನಲ್ಲಿ ಮತ್ತೆ ತಲ್ವಾರ್ ದಾಳಿ ನಡೆದಿದೆ. ಆದರೆ, ಅದೃಷ್ಟವಶಾತ್ ಈ ಬಾರಿ ಒಬ್ಬ ಆರೋಪಿ ಸಿಕ್ಕಿಬಿದ್ದಿದ್ದಾನೆ. ಉಳಿದವರ ಪತ್ತೆಗೆ ತನಿಖೆ ನಡೆಯುತ್ತಿದೆ. ತಲ್ವಾರ್ ದಾಳಿ ಮಾಡಿದ ನಾಲ್ವರ ಪೈಕಿ ಒಬ್ಬ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯ ಇಲ್ಲಿದೆ.
ಮಂಗಳೂರು, ನವೆಂಬರ್ 25: ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲ್ವಾರ್ ಅಖಿಲೇಶ್ ಎಂಬ ಯುವಕನ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರ ಗ್ಯಾಂಗ್ ತಲ್ವಾರ್ ದಾಳಿ ಮಾಡಿದೆ. ಗಾಯಗೊಂಡ ಅಖಿಲೇಶ್ಗೆ ಸದ್ಯ ಮೂಡಬಿದಿರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿ ಮಾಡಿ ಪರಾರಿಯಾಗುವಾಗ ಒಬ್ಬ ಆರೋಪಿ ಸಿನಾನ್ ಎಂಬಾತ ಬಾಕಿಯಾಗಿದ್ದಾನೆ. ತಪ್ಪಿಸಿಕೊಂಡು ಓಡಿಹೋಗಲು ಯತ್ನಿಸಿದ್ದಾನೆ. ಸಿಕ್ಕ ಸಿಕ್ಕ ವಾಹನಗಳನ್ನು ಬಲವಂತವಾಗಿ ಅಡ್ಡಹಾಕಿ ನಿಲ್ಲಿಸಲು ಯತ್ನಿಸಿದ್ದಾನೆ. ಆದರೆ ಯಾರು ಕೂಡ ವಾಹನ ನಿಲ್ಲಿಸಿಲ್ಲ. ಒಬ್ಬ ಬೈಕ್ ಸವಾರ ಈತನ ಪುಂಡಾಟದಿಂದ ಗಾಬರಿಯಾಗಿ ಬೈಕ್ನಿಂದ ಬಿದ್ದ ಘಟನೆಯೂ ನಡೆದಿದೆ. ಕೊನೆಗೂ ಸಿನಾನ್ನನ್ನು ಸ್ಥಳೀಯರು ಹಿಡಿದಿದ್ಹೇಗೆ ಎಂಬ ಸಿಸಿಟಿವಿ ವಿಡಿಯೋ ಇಲ್ಲಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ಝಳಪಿಸಿದ ತಲ್ವಾರ್, ಯುವಕನ ಮೇಲೆ ದಾಳಿ: ಶಾಂತಿಭಂಗದ ಆತಂಕ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
