ಬಾವಿಗೆ ಬಿದ್ದಿದ್ದ ಬಲು ಅಪರೂಪದ ಕರಿ ಚಿರತೆ ರಕ್ಷಣೆ ಮಾಡಿದ ಅರಣ್ಯ ಇಲಾಖೆ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 31, 2024 | 8:41 PM

ಮಂಗಳೂರು ತಾಲೂಕಿನ ಎಡಪದವು ಸಮೀಪದ ಗೊಸ್ಪೆಲ್ ಸನಿಲ ಎಂಬಲ್ಲಿ ಈ ಘಟನೆ ನಡೆದಿದ್ದು, ಬಾವಿಗೆ ಬಿದ್ದಿದ್ದ, ಬಲು ಅಪರೂಪದ ಕರಿ ಚಿರತೆಯನ್ನು ಅರಣ್ಯ ಇಲಾಖೆ ಸ್ಥಳೀಯರ ಸಹಕಾರದಲ್ಲಿ ಬಾವಿಯಿಂದ ಮೇಲೆತ್ತಿ ರಕ್ಷಿಸಿದ್ದಾರೆ. ಸನಿಲ ನಿವಾಸಿ ಶಕುಂತಲಾ ಆಚಾರ್ಯ ಎಂಬವರ ಮನೆಯ ಬಾವಿಯಲ್ಲಿ ಇಂದು ಬೆಳಿಗ್ಗೆ ಚಿರತೆ ಪತ್ತೆಯಾಗಿತ್ತು.

ಮಂಗಳೂರು, ಮಾರ್ಚ್​ 31: ಬಾವಿಗೆ ಬಿದ್ದ ಅಪರೂಪದ ಕರಿ ಚಿರತೆ (leopard) ಯನ್ನು ಸ್ಥಳೀಯರ ನೆರವಿನಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರು ತಾಲೂಕಿನ ಎಡಪದವು ಸಮೀಪದ ಗೊಸ್ಪೆಲ್ ಸನಿಲ ಎಂಬಲ್ಲಿ ಈ ಘಟನೆ ನಡೆದಿದ್ದು, ಬಾವಿಗೆ ಬಿದ್ದಿದ್ದ, ಬಲು ಅಪರೂಪದ ಕರಿ ಚಿರತೆಯನ್ನು ಅರಣ್ಯ ಇಲಾಖೆ ಸ್ಥಳೀಯರ ಸಹಕಾರದಲ್ಲಿ ಬಾವಿಯಿಂದ ಮೇಲೆತ್ತಿ ರಕ್ಷಿಸಿದ್ದಾರೆ. ಸನಿಲ ನಿವಾಸಿ ಶಕುಂತಲಾ ಆಚಾರ್ಯ ಎಂಬವರ ಮನೆಯ ಬಾವಿಯಲ್ಲಿ ಇಂದು ಬೆಳಿಗ್ಗೆ ಚಿರತೆ ಪತ್ತೆಯಾಗಿತ್ತು. ಶಕುಂತಲಾ ಅವರ ಪತಿ ನೀರು ತರಲು ಹೋದಾಗ ಬಾವಿಯಲ್ಲಿ ಚಿರತೆ ಕಂಡು ಸ್ಥಳೀಯರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಅರಣ್ಯ ಇಲಾಖೆ, ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ನೇತೃತ್ವದಲ್ಲಿ ತಂಡ ಸ್ಥಳೀಯರ ಸಹಾಯದೊಂದಿಗೆ ಕರಿಚಿರತೆಯನ್ನು ಬೋನಿನ ಮೂಲಕ ಬಾವಿಯಿಂದ ಮೇಲೆತ್ತುವ ಕಾರ್ಯಾಚರಣೆ ನಡೆಸಿದ್ದರು. ಕರಿಚಿರತೆ ಬಲು ಅಪರೂಪದ ಚಿರತೆಯಾಗಿದ್ದು ಪಶು ವೈದ್ಯರಿಂದ ಆರೋಗ್ಯ ತಪಾಸಣೆ ಬಳಿಕ ಅವರ ಸಲಹೆಯಂತೆ ಮುಂದಿನ ಕೃಮ ಕೈಗೊಳ್ಳಲಾಗುವುದು. ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಮೊದಲಿನಿಂದಲೂ ದೂರುಗಳು ಬಂದಿದ್ದವು ಇದೀಗ ಸ್ಥಳೀಯರ ಸಹಕಾರದಲ್ಲಿ ಚಿರತೆಯನ್ನು ರಕ್ಷಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾತಿ ರಾಜೇಶ್ ಬಳಿಗಾರ್ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Mar 31, 2024 08:15 PM