ಕಾರಿನ ಗಾಜು ಒಡೆದುಹಾಕಿದ ಟ್ರಾಫಿಕ್ ಪೊಲೀಸ್! ವಿಡಿಯೋ ವೈರಲ್

Updated By: Ganapathi Sharma

Updated on: Oct 06, 2025 | 11:57 AM

ಟ್ರಾಫಿಕ್ ಪೊಲೀಸರೇ ಕಾರಿನ ಗಾಜು ಒಡೆದುಹಾಕಿದ ಪ್ರಕರಣ ಮಂಗಳೂರಿನ ನಂತೂರು ಸರ್ಕಲ್ ಬಳಿ ನಡೆದಿದೆ. ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಕಾರು ಚಾಲಕನ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ವರ್ತನೆಗೆ ಸಾರ್ವಜನಿಕರಿಂದ ಆಕ್ರೊಶ ವ್ಯಕ್ತವಾಗಿದೆ.

ಮಂಗಳೂರು, ಅಕ್ಟೋಬರ್ 6: ಮಂಗಳೂರಿನ ನಂತೂರು ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರೇ ಕಾರೊಂದರ ಹಿಂದಿನ ಗಾಜು ಒಡೆದುಹಾಕಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಡ್ರಂಕ್ ಅಂಡ್ ಡ್ರೈವ್ ಅನುಮಾನದಲ್ಲಿ ಟ್ರಾಫಿಕ್ ಪೊಲೀಸ್‌ ಕಾರು ನಿಲ್ಲಿಸಲು ಸೂಚಿಸಿದ್ದಾರೆ. ಆದರೆ, ಚಾಲಕ ಕಾರು ನಿಲ್ಲಿಸದೇ ಮುಂದುವರಿದಿದ್ದಾನೆ. ಇದರಿಂದ ಕೋಪಗೊಂಡ ಪೊಲೀಸ್ ಕಾರಿನ ಹಿಂಬದಿ ಗ್ಲಾಸ್ ಒಡೆದು ಹಾಕಿದ್ದಾರೆ. ನಂತರ ಸ್ಥಳದಲ್ಲಿ ಇದ್ದವರು ಪೊಲೀಸರನ್ನು ತರಾಟೆ ತೆಗೆದುಕೊಂಡಿದ್ದಾರೆ. ಬಳಿಕ ಚಾಲಕನ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ