ಫೆಂಗಲ್ ಪ್ರಭಾವ; ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ವಾಹನ ಸವಾರರ ಪರದಾಟ

ಫೆಂಗಲ್ ಪ್ರಭಾವ; ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ವಾಹನ ಸವಾರರ ಪರದಾಟ

ಅರುಣ್​ ಕುಮಾರ್​ ಬೆಳ್ಳಿ
|

Updated on:Dec 03, 2024 | 11:31 AM

ಫೆಂಗಲ್ ಚಂಡಮಾರುತವು ಪಶ್ಚಿಮಾಭಿಮುಖವಾಗಿ ಸಾಗುತ್ತಿರುವುದರಿಂದ ರಾಜ್ಯದ ಹಲವಾರು ಜಿಲ್ಲೆಗಳು ಪ್ರಭಾವಕ್ಕೊಳಗಾಗಿವೆ, ಸುಮಾರು ಹತ್ತು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಜೋರಾಗಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಸಾಯಂಕಾಲದವರೆಗೆ ಮಳೆಯಾಗಲಿದೆ.

ಮಂಗಳೂರು: ಫೆಂಗಲ್ ಚಂಡಮಾರುತದ ಸುಳಿಗೆ ಸಿಕ್ಕಿರುವ ರಾಜ್ಯದ ಕರಾವಳಿ ಪ್ರಾಂತ್ಯ ಪರಿಸ್ಥಿತಿಯೊಂದಿಗೆ ಏಗಲು ಹರಸಾಹಸ ನಡೆಸಿದೆ. ನಮ್ಮ ಮಂಗಳೂರು ವರದಿಗಾರ ನೀಡುವ ಮಾಹಿತಿ ಪ್ರಕಾರ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ರಾತ್ರಿಯೆಲ್ಲ ಸಾಧಾರಣ ಮಳೆ ಸುರಿದಿರುವುದರಿಂದ ಎರಡೂ ಜಿಲ್ಲೆಗಳ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ್ದಲ್ಲದೆ ರಾಷ್ಟ್ರೀಯ ಹೆದ್ದಾರಿಯನ್ನೂ ಜಲಾವೃತಗೊಳಿಸಿದೆ. ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕರ್ನಾಟಕದಲ್ಲಿ ಫೆಂಗಲ್ ಚಂಡಮಾರುತ ಮಳೆಯ ಅಬ್ಬರ: 10 ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

Published on: Dec 03, 2024 10:32 AM