ಬೆಂಗಳೂರು ಗ್ರಾಮಾಂತರ: ಘಾಟಿ ಸುಬ್ರಮಣ್ಯ ದೇವಸ್ಥಾನಲ್ಲಿ ಸರ್ಕಾರದಿಂದ ‘ಮಾಂಗಲ್ಯ ಭಾಗ್ಯ’;ದಾಂಪತ್ಯ ಜೀವನಕ್ಕೆ ಕಾಲಿಟ್ಟ 13 ನವ ಜೋಡಿಗಳು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 31, 2024 | 2:29 PM

ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ಸರ್ಕಾರದಿಂದ ‘ಮಾಂಗಲ್ಯ ಭಾಗ್ಯ’ ಯೋಜನೆಯಡಿ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದ್ದು, 13 ನವ ಜೋಡಿಗಳು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಾಹದಲ್ಲಿ ಭಾಗಿಯಾದ ವಧು-ವರರಿಗೆ ನಗದು ಜೊತೆಗೆ ಚಿನ್ನದ ತಾಳಿ ನೀಡಲಾಯಿತು.

ಬೆಂಗಳೂರು ಗ್ರಾಮಾಂತರ,ಜ.31: ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ಸರ್ಕಾರದಿಂದ ‘ಮಾಂಗಲ್ಯ ಭಾಗ್ಯ’ ಯೋಜನೆಯಡಿ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದ್ದು, 13 ನವ ಜೋಡಿಗಳು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಾಹದಲ್ಲಿ ಭಾಗಿಯಾದ ವಧು-ವರರಿಗೆ ನಗದು ಜೊತೆಗೆ ಚಿನ್ನದ ತಾಳಿ ನೀಡಿದರೆ, ಇತ್ತ ದೇವಾಲಯದ ವತಿಯಿಂದ ಬಟ್ಟೆ ಸೇರಿ ವಿವಿಧ ವಸ್ತುಗಳನ್ನು ವಿತರಣೆ ಮಾಡಲಾಯಿತು. ಇನ್ನು ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ 13 ನವ ಜೋಡಿಗಳಿಗೆ ಹಾಗೂ ಸಂಬಂಧಿಕರಿಗೆ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ