ಮಾವು ಬೆಳೆಗೆ ಬೆಂಬಲ ಘೋಷಿಸುವಂತೆ ಬೆಳೆಗಾರರಿಂದ ಶ್ರೀನಿವಾಸಪುರ ಬಂದ್, ವಾಹನ ಸಂಚಾರ ಅಸ್ತವ್ಯಸ್ತ

Updated on: Jun 11, 2025 | 10:19 AM

ಮಾವು ಬೆಳೆಗಾರರು ಶ್ರೀನಿವಾಸಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಕಲ್ಲುಗಳನ್ನು ಇಟ್ಟು ಬಂದ್ ಮಾಡಿರುವರೆಂದು ನಮ್ಮ ವರದಿಗಾರ ಮಾಹಿತಿ ನೀಡಿದ್ದಾರೆ. ತಾಡಿಗೋಳ ಕ್ರಾಸ್, ರೋಜರನಹಳ್ಳಿ ಕ್ರಾಸ್ ಸೇರಿ ಹಲವೆಡೆ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬರಲು ಮತ್ತು ಬೆಂಬಲ ಬೆಲೆ ಘೋಷಣೆ ಮಾಡಲು ಅವರು ಒತ್ತಾಯಿಸುತ್ತಿದ್ದಾರೆ.

ಕೋಲಾರ, ಜೂನ್ 11: ಕೋಲಾರ ಜಿಲ್ಲೆಯ ರೈತಾಪಿ ಸಮುದಾಯ (farming community) ಪ್ರತಿವರ್ಷ ಒಂದಿಲ್ಲೊಂದು ಸಮಸ್ಯೆಗೆ ಈಡಾಗುತ್ತಾರೆ. ಶ್ರೀನಿವಾಸಪುರದ ಮಾವು ಬೆಳೆಗಾರರು ಇಂದು ಮಾವಿಗೆ ಬೆಂಬಲ ಬೆಲೆ ಆಗ್ರಹಿಸಿ ಶ್ರೀನಿವಾಸಪುರ ಬಂದ್​ಆಚರಿಸುತ್ತಿದ್ದಾರೆ. ಪಟ್ಟಣದ ಮುಖ್ಯರಸ್ತೆಯೊಂದರಲ್ಲಿ ಬೆಳೆಗಾರರು ತಾವು ಬೆಳೆದ ಮಾವಿನ ಫಸಲನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಕಾಲ ಮಳೆಯಿಂದಾಗಿ ಕೋಲಾರ ಜಿಲ್ಲೆ ರಾಜ್ಯದ ಇತರ ಭಾಗಗಳಲ್ಲಿ ಮಾವಿನ ಫಸಲು ಹಾಳಾಗಿದೆ. ಹಾಗಾಗಿ, ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಿಸಲೇಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ:  ಮಾವು ಇಳುವರಿ ಕುಸಿತ: ಬಂಪರ್ ನಿರೀಕ್ಷೆಯಲ್ಲಿದ್ದ ಬೆಳೆಗಾರರು ಕಂಗಾಲು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Jun 11, 2025 10:18 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More