AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಮಾವು ಪ್ರಿಯರು

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಮಾವು ಪ್ರಿಯರು

ಗಣಪತಿ ಶರ್ಮಾ
|

Updated on: May 12, 2026 | 6:55 AM

Share

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಮೇ 9 ರಿಂದ 18 ರವರೆಗೆ ಮಾವು ಮತ್ತು ಹಲಸು ಮೇಳ ನಡೆಯುತ್ತಿದೆ. ಬಿಸಿಲಿನ ತಾಪದ ನಡುವೆಯೂ ಮಾವು ಪ್ರಿಯರು ವಿವಿಧ ಬಗೆಯ ಮಾವಿನ ಹಣ್ಣುಗಳು, ಹಲಸಿನ ಹಣ್ಣು ಹಾಗೂ ಮಾವಿನಿಂದ ತಯಾರಿಸಿದ ಖಾದ್ಯಗಳನ್ನು ಸವಿದು ಆನಂದಿಸುತ್ತಿದ್ದಾರೆ. ರೈತರಿಂದ ನೇರ ಮಾರಾಟ ನಡೆದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಹ ಭೇಟಿ ನೀಡಿ ರೈತರ ಬೆಳೆಗಳಿಗೆ ಸೂಕ್ತ ಬೆಲೆ ಮತ್ತು ಕೋಲ್ಡ್ ಸ್ಟೋರೇಜ್ ಸೌಲಭ್ಯಕ್ಕೆ ಒತ್ತಾಯಿಸಿದರು.

ಬೆಂಗಳೂರು, ಮೇ 12: ಕಬ್ಬನ್ ಪಾರ್ಕ್‌ನಲ್ಲಿ ಆಯೋಜಿಸಲಾದ ಮಾವು ಮತ್ತು ಹಲಸು ಮೇಳ ಜನರನ್ನು ಸೆಳೆಯುತ್ತಿದೆ. ಮೇ 9 ರಂದು ಆರಂಭಗೊಂಡು ಮೇ 18 ರವರೆಗೆ ನಡೆಯುತ್ತಿರುವ ಈ ಮೇಳದಲ್ಲಿ ಮಾವು ಪ್ರಿಯರು ವಿವಿಧ ತಳಿಯ ಮಾವಿನ ಹಣ್ಣುಗಳಾದ ಮಲ್ಗೋವಾ, ನೀಲಂ, ತೂತಾಪುರಿ, ರಸಪುರಿ ಮತ್ತು ಹಲಸಿನ ಹಣ್ಣುಗಳಿಗೆ ಮುಗಿಬೀಳುತ್ತಿದ್ದಾರೆ. ಮಾವಿನಿಂದ ತಯಾರಿಸಿದ ಐಸ್ ಕ್ರೀಂ, ಜ್ಯೂಸ್, ಹಲ್ವಾ ಸೇರಿದಂತೆ ಹಲವು ಖಾದ್ಯಗಳು ಪ್ರವಾಸಿಗರ ಗಮನ ಸೆಳೆಯುತ್ತಿವೆ. ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಹಲವು ಭಾಗಗಳಿಂದ ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುತ್ತಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕೂಡ ಸೋಮವಾರ ಮಾವು ಮೇಳಕ್ಕೆ ಭೇಟಿ ನೀಡಿದ್ದು, ರೈತರ ಬೆಳೆಗಳಿಗೆ ಸೂಕ್ತ ಬೆಲೆ ಹಾಗೂ ಕೋಲ್ಡ್ ಸ್ಟೋರೇಜ್ ಸೌಲಭ್ಯ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More