‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ

Updated on: Jun 06, 2026 | 1:50 PM

ಕಿಚ್ಚ ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ನಾಯಕನಾಗಿ ನಟಿಸಿರುವ 'ಮ್ಯಾಂಗೋ ಪಚ್ಚ' ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸಿನಿಮಾ ಎಲ್ಲೆಡೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ಚಿತ್ರಕ್ಕೆ ಸಿಗುತ್ತಿರುವ ಅಭೂತಪೂರ್ವ ಯಶಸ್ಸು ಮತ್ತು ಸಕಾರಾತ್ಮಕ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳಲು ಚಿತ್ರತಂಡವು ಇತ್ತೀಚೆಗೆ ವಿಶೇಷ ಸುದ್ದಿಗೋಷ್ಠಿಯನ್ನು ಹಮ್ಮಿಕೊಂಡಿತ್ತು.

ಸುದೀಪ್ ಅಳಿಯ ಸಂಚಿತ್ ಸಂಜೀವ್ ಅವರ ‘ಮ್ಯಾಂಗೋ ಪಚ್ಚ’ ಸಿನಿಮಾ ಮೆಚ್ಚುಗೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಸಿನಿಮಾ ಸುದ್ದಿಗೋಷ್ಠಿ ಕರೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಚಿತ್ರದ ವಿಭಿನ್ನ ಕಥಾಹಂದರ ಹಾಗೂ ಮೇಕಿಂಗ್ ಬಗ್ಗೆ ಪ್ರೇಕ್ಷಕರಿಂದ ಅದ್ಭುತವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಇಡೀ ತಂಡ ಸಂತಸ ವ್ಯಕ್ತಪಡಿಸಿದೆ. ಕಮರ್ಷಿಯಲ್ ಅಂಶಗಳ ಜೊತೆಗೆ ಸಾಗುವ ಈ ಕಥೆ ಜನರಿಗೆ ಸಖತ್ ಇಷ್ಟವಾಗಿದ್ದು, ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಖ ಮಾಡುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಸಂಚಿತ್ ಸಂಜೀವ್ ತಮ್ಮ ಅತ್ಯುತ್ತಮ ನಟನೆ, ಆಕ್ಷನ್ ಹಾಗೂ ಸ್ವಾಗ್ ಮೂಲಕ ಸಿನಿಪ್ರೇಮಿಗಳ ಮತ್ತು ವಿಮರ್ಶಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jun 06, 2026 12:17 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More