AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕ ಲೋಕದ ಅಡ್ಡೆಯಾಗುತ್ತಿದೆ ಮಣಿಪಾಲ: ಪಬ್‌ಗಳಲ್ಲಿ ಅಸಭ್ಯ ವರ್ತನೆಯ ವಿಡಿಯೋ ವೈರಲ್

ಮಾದಕ ಲೋಕದ ಅಡ್ಡೆಯಾಗುತ್ತಿದೆ ಮಣಿಪಾಲ: ಪಬ್‌ಗಳಲ್ಲಿ ಅಸಭ್ಯ ವರ್ತನೆಯ ವಿಡಿಯೋ ವೈರಲ್

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Nov 14, 2026 | 7:21 AM

Share

ಮಣಿಪಾಲ್ ಪಬ್‌ಗಳಲ್ಲಿ ಮಾದಕ ದ್ರವ್ಯಗಳ ಸೇವನೆ ಮತ್ತು ಅಸಭ್ಯ ವರ್ತನೆಯ ಆರೋಪಗಳು ಕೇಳಿಬಂದಿವೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳು ಯುವಕ-ಯುವತಿಯರು ಪ್ರಜ್ಞೆ ಕಳೆದುಕೊಂಡು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುವುದನ್ನು ತೋರಿಸಿವೆ. ಈ ಘಟನೆಗಳು ಉಡುಪಿಯ ಮಣಿಪಾಲ್‌ನಲ್ಲಿ ಪಬ್ ಸಂಸ್ಕೃತಿಯ ಬಗ್ಗೆ ವ್ಯಾಪಕ ಚರ್ಚೆ ಮತ್ತು ಆತಂಕಕ್ಕೆ ಕಾರಣವಾಗಿವೆ.

ಉಡುಪಿ, ನವೆಂಬರ್ 14: ಉಡುಪಿಯ ಮಣಿಪಾಲ್‌ನಲ್ಲಿರುವ ಪಬ್‌ಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಆರೋಪಗಳು ಕೇಳಿಬಂದಿದೆ. ಪಬ್‌ಗಳಲ್ಲಿ ಯುವಕ-ಯುವತಿಯರು ಅಸಭ್ಯವಾಗಿ ವರ್ತಿಸುತ್ತಿರುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಾದಕ ದ್ರವ್ಯಗಳ ಬಳಕೆಯ ಕುರಿತು ಗಂಭೀರ ಆರೋಪಗಳಿಗೆ ಕಾರಣವಾಗಿವೆ. ಈಶ್ವರ ನಗರದ ಪಬ್ ಒಂದರಲ್ಲಿ ಜನರೆದುರೇ ಜೋಡಿಯೊಂದು ಮದ್ಯಪಾನ ಮಾಡಿ ಚುಂಬಿಸುತ್ತಿರುವ ದೃಶ್ಯಗಳು ವೈರಲ್ ಆಗಿವೆ. ಅಲ್ಲದೆ, ಯುವಕ-ಯುವತಿಯರು ನಶೆಯಲ್ಲಿ ತೇಲಾಡುತ್ತಾ, ತಾವು ಎಲ್ಲಿದ್ದೇವೆ ಅಥವಾ ಸುತ್ತಮುತ್ತ ಯಾರೆಲ್ಲಾ ಇದ್ದಾರೆ ಎಂಬ ಪ್ರಜ್ಞೆಯಿಲ್ಲದೆ ವರ್ತಿಸುತ್ತಿರುವುದು ವೀಡಿಯೊಗಳಲ್ಲಿ ಸ್ಪಷ್ಟವಾಗಿ ಕಂಡುಬರುತ್ತದೆ. ಮೈಮೇಲೆ ಪ್ರಜ್ಞೆ ಇಲ್ಲದಷ್ಟು ಕುಡಿದು ಅಸಭ್ಯವಾಗಿ ವರ್ತಿಸುತ್ತಿರುವ ಇವರ ನಡವಳಿಕೆಯು ಸುತ್ತಮುತ್ತಲಿನ ಜನರಿಗೆ ಮುಜುಗರ ತಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More