ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

|

Updated on: Dec 28, 2024 | 12:55 PM

ಮನಮೋಹನ್ ಸಿಂಗ್ ಅವರ ಅಂತಿಮ ವಿಧಿವಿಧಾನಗಳು ನಡೆಯುತ್ತಿವೆ. ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ನಮನ ಸಲ್ಲಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್, ಪ್ರತಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರು ಅಂತಿಮ ನಮನ ಸಲ್ಲಿಸಿದ್ದಾರೆ. ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಅನಿಲ್ ಚೌಹಾಣ್ ಮತ್ತು ಮೂರು ಸೇನಾ ಮುಖ್ಯಸ್ಥರು ಕೂಡ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ನವದೆಹಲಿ: ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತಿಮ ವಿಧಿವಿಧಾನ ನಡೆಯುತ್ತಿದೆ. ಗುರುವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಇಂದು ನೆರವೇರಿಸಲಾಗುತ್ತಿದೆ. ತ್ರಿವರ್ಣ ಧ್ವಜದಲ್ಲಿ ಹೊದಿಸಲಾದ ಹೂವಿನ ಪೆಟ್ಟಿಗೆಯನ್ನು ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಮೇಲೆ ಪುಷ್ಪಗುಚ್ಛವನ್ನು ಇರಿಸಿ ನಮನ ಸಲ್ಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ