ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದು ಅವರ 5ನೇ ಸಿನಿಮಾ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಮನು ಸಹೋದರ ವಿಕ್ರಮ್ ರವಿಚಂದ್ರನ್ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಶುಭಾಶಯ ತಿಳಿಸಿದರು.
ನಟ ಮನೋರಂಜನ್ ರವಿಚಂದ್ರನ್ (Manoranjan Ravichandran) ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದು ಅವರ 5ನೇ ಸಿನಿಮಾ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಮನು ಸಹೋದರ ವಿಕ್ರಮ್ ರವಿಚಂದ್ರನ್ (Vikram Ravichandran) ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಶುಭಾಶಯ ತಿಳಿಸಿದರು. ಹೊಸ ನಿರ್ದೇಶಕ ರುದ್ರೇಶ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಮನೋರಂಜನ್ ಜೊತೆ ಬೃಂದಾ ಆಚಾರ್ಯ (Brinda Acharya) ನಾಯಕಿಯಾಗಿ ನಟಿಸುತ್ತಿದ್ದಾರೆ. ಅನುಷಾ ರೈ ಅವರಿಗೆ ಒಂದು ವಿಶೇಷ ಪಾತ್ರವಿದೆ. ‘ವೈಎಸ್ ಪ್ರೊಡಕ್ಷನ್’ ಮೂಲಕ ಶ್ರೀನಿವಾಸ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

