ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು, ಸಾರ್ವಜನಿಕರ ಸಹಾಯಕ್ಕೆ ಎಲ್ಲೆಡೆ ಶಾಘ್ಲನೆ

Edited By:

Updated on: Nov 06, 2026 | 9:01 PM

ಯುವಕನೋರ್ವನ ತಂಗಿಯ ಮದುವೆ ಹಿನ್ನೆಲೆಯಲ್ಲಿ ಲಗ್ನ ಪತ್ರಿಕೆ ತೆಗೆದುಕೊಂಡು ಹೋಗುತ್ತಿದ್ದು, ಈ ವೇಳೆ ಬೈಕ್ ಮೇಲಿಂದ ಲಗ್ನ ಪತ್ರಿಕೆ ಬಂಡಲ್ ರಸ್ತೆಗೆ ಬಿದ್ದಿದೆ. ಪರಿಣಾಮ ಪೀಣ್ಯ ಫ್ಲೈ ಓವರ್ ಮೇಲೆ ಲಗ್ನ ಪತ್ರಿಕೆಗಳು ಚೆಲ್ಲಾಪಿಲ್ಲಿಯಾಗಿದ್ದು, ಕೂಡಲೇ ಸಾರ್ವಜನಿಕರು ಯುವಕನ ಸಹಾಯಕ್ಕೆ ದಾವಿಸಿ ರಸ್ತೆ ತುಂಬ ಬಿದ್ದಿದ್ದ ಲಗ್ನ ಪತ್ರಿಕೆಗಳನ್ನು ಎತ್ತಿ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಕಾರ್ಯಕ್ಕೆ ಸಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗಳು ವ್ಯಕ್ತವಾಗಿವೆ.

ಬೆಂಗಳೂರು, ನವೆಂಬರ್ 06): ಯುವಕನೋರ್ವನ ತಂಗಿಯ ಮದುವೆ ಹಿನ್ನೆಲೆಯಲ್ಲಿ ಲಗ್ನ ಪತ್ರಿಕೆ ತೆಗೆದುಕೊಂಡು ಹೋಗುತ್ತಿದ್ದು, ಈ ವೇಳೆ ಬೈಕ್ ಮೇಲಿಂದ ಲಗ್ನ ಪತ್ರಿಕೆ ಬಂಡಲ್ ರಸ್ತೆಗೆ ಬಿದ್ದಿದೆ. ಪರಿಣಾಮ ಪೀಣ್ಯ ಫ್ಲೈ ಓವರ್ ಮೇಲೆ ಲಗ್ನ ಪತ್ರಿಕೆಗಳು ಚೆಲ್ಲಾಪಿಲ್ಲಿಯಾಗಿದ್ದು, ಕೂಡಲೇ ಸಾರ್ವಜನಿಕರು ಯುವಕನ ಸಹಾಯಕ್ಕೆ ದಾವಿಸಿ ರಸ್ತೆ ತುಂಬ ಬಿದ್ದಿದ್ದ ಲಗ್ನ ಪತ್ರಿಕೆಗಳನ್ನು ಎತ್ತಿ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಕಾರ್ಯಕ್ಕೆ ಸಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗಳು ವ್ಯಕ್ತವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More