ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಯಲ್ಲಿ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ. ಇದರಲ್ಲಿ 4,05,95,395 ರೂಪಾಯಿ ನಗದು, 116 ಗ್ರಾಂ ಚಿನ್ನ ಮತ್ತು 1 ಕೆಜಿ 495 ಗ್ರಾಂ ಬೆಳ್ಳಿ ಸೇರಿವೆ. ಬೇಸಿಗೆ ರಜೆಯಿಂದ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ದೇಣಿಗೆಯ ಪ್ರಮಾಣವು ಏರಿಕೆಯಾಗಿದೆ.
ರಾಯಚೂರು, ಏಪ್ರಿಲ್ 25: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹುಂಡಿಯಿಂದ ಕೋಟಿ-ಕೋಟಿ ಹಣ ಹರಿದು ಬಂದಿದೆ. ರಾಯರ ಮಠದಲ್ಲಿ ಸಿಬ್ಬಂದಿ ಹಾಗೂ ಸ್ವಯಂಸೇವಕರು ಹುಂಡಿ ಹಣ ಎಣಿಕೆ ಕಾರ್ಯ ನಡೆಸಿದರು. ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ. 4,05,95,395 ರೂಪಾಯಿ ನಗದು, 116 ಗ್ರಾಂ ಚಿನ್ನ, 1 ಕೆಜಿ 495 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಂಗ್ರಹವಾಗಿದೆ.
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀಮಠಕ್ಕೆ ತೆರಳುತ್ತಿದ್ದಾರೆ. ಹೀಗಾಗಿ, ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹುಂಡಿಯಲ್ಲಿ ನಾಲ್ಕು ಕೋಟಿ ರೂ. ಕಾಣಿಕೆ ದಾಟಿದೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
