ಈ ಬಾರಿ ಉತ್ತಮ ಮಳೆ ಇದೆ: ರೈತರಿಗೆ ಆತ್ಮ ಸ್ಥೈರ್ಯ ತುಂಬಿದ ಮಂತ್ರಾಲಯ ಶ್ರೀ
ಮಳೆ ಇಲ್ಲದೇ ಕಂಗಾಲಾಗಿರುವ ರೈತಾಪಿ ವರ್ಗಕ್ಕೆ ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಆತ್ಮ ಸ್ಥೈರ್ಯ ತುಂಬಿದ್ದಾರೆ.
ರಾಯಚೂರು: ಜೂನ್ನಲ್ಲಿ ಕೈಕೊಟ್ಟು ರೈತರನ್ನು ಕಂಗಾಲು ಮಾಡಿದ್ದ ಮಳೆ ಇದೀಗ ಜುಲೈ ಆರಂಭವಾಗುತ್ತಿದ್ದಂತೆಯೇ ರಾಜ್ಯದೆಲ್ಲೆಡೆ ವರುಣನ ಅಬ್ಬರ ಜೋರಾಗಿದೆ. ಇನ್ನು ಉತ್ತರ ಕರ್ನಾಟಕದ ಕೆಲವೆಡೆ ಮಳೆ ಇಲ್ಲದೇ ರೈತರು ಬಿತ್ತನೆ ಮಾಡದೇ ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ. ಇದೀಗ ಈ ರೈತರಿಗೆ ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಆತ್ಮ ಸ್ಥೈರ್ಯ ತುಂಬಿದ್ದಾರೆ. ಈ ಬಾರಿ ಉತ್ತಮ ಮಳೆ ಇದೆ. ದೇಶದ ಬೆನ್ನೆಲುಬು ಆಗಿರುವ ರೈತಾಪಿ ಜನ ಕಂಗೇಡುವುದು ಬೇಡ. ಅಧೈರ್ಯವಾಗಿರೋದು ಬೇಡ. ನಾವೆಲ್ಲರೂ ಆಶಾವಾದಿಗಳಾಗೋಣ. ಭಗವಂತನನ್ನ ನಂಬೋಣ. ಉತ್ತಮ ಮಳೆ ಆಗತ್ತೆ,ಬೆಳೆ ಆಗತ್ತೆ.. ಆ ಮೂಲಕ ರೈತಾಪಿ ಜನ ಆತ್ಮ ಧೈರ್ಯ ಕಳೆದುಕೊಳ್ಳಬಾರದು ಎಂದು ಡಾ.ಸುಬುಧೇಂದ್ರ ತೀರ್ಥರು ರೈತರಿಗೆ ಆತ್ಮ ಸ್ಥೈರ್ಯ ತುಂಬಿದ್ದಾರೆ.
Published on: Jul 05, 2023 02:18 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

