ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ ರೂ. ದೇಣಿಗೆ ಘೋಷಿಸಿದ ಮಂತ್ರಾಲಯ ಪೀಠಾಧಿಪತಿ ಸುಬುಧೇಂದ್ರ ತೀರ್ಥರು
ಪಹಲ್ಗಾಮ್ ದಾಳಿಯ ನಂತರ ಭಾರತ ಸರ್ಕಾರ ಮತ್ತು ಭಾರತೀಯ ಸೇನೆ ಕೈಗೊಂಡ ದಿಟ್ಟ ನಿರ್ಧಾರ ಹಾಗೂ ಕಾರ್ಯಾಚರಣೆಯನ್ನು ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶ್ಲಾಘಿಸಿದ್ದಾರೆ. ಜತೆಗೆ, ಮಠದಿಂದ ಪ್ರಸಾದ ರೂಪವಾಗಿ ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಸುಬುಧೇಂದ್ರ ತೀರ್ಥರ ಮಾತಿನ ವಿಡಿಯೋ ಇಲ್ಲಿದೆ.
ರಾಯಚೂರು, ಮೇ 13: ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಘೋಷಣೆ ಮಾಡಿದ್ದಾರೆ. ಶ್ರೀಗಳ 13ನೇ ಪಟ್ಟಾಭಿಷೇಕ ಮಹೋತ್ಸವದ ವೇಳೆ ದೇಶದ ವಿದ್ಯಮಾನಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಪಹಲ್ಗಾಮ್ ದಾಳಿಯಲ್ಲಿ ಮಡಿದವರಿಗೆ ಹಾಗೂ ಆಪರೇಷನ್ ಸಿಂದೂರ್ ಕಾರ್ಯಾಚರಣೆ ವೇಳೆ ಹುತಾತ್ಮರಾದ ಯೋಧರಿಗೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸಿದರು. ಅಲ್ಲದೆ ಸೇನೆ, ಸರ್ಕಾರ ಹಾಗೂ ಪ್ರಧಾನ ಮಂತ್ರಿಯಾದಿ ಸಚಿವರ ಕಾರ್ಯವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 13, 2025 10:54 AM
Latest Videos

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್

6,6,6,6,6:: ಬಿರುಗಾಳಿ ಬ್ಯಾಟಿಂಗ್ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!

‘ಎಸ್ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್

ವೆಸ್ಟ್ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
