ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನೆರವೇರಿದ ವೈಕುಂಠ ಏಕಾದಶಿ
ಮಂತ್ರಾಲಯ ರಾಯರ ಮಠದಲ್ಲಿ ವೈಕುಂಠ ಏಕಾದಶಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಮಂತ್ರಾಲಯದ ಓಲ್ಡ್ ಟೌನ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ವಿವಿಧ ಬಗೆಯ ಹೂವುಗಳಿಂದ ಶ್ರೀಮಠ ಹಾಗೂ ದೇವಸ್ಥಾನವನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಶ್ರೀ ರಾಘವೇಂದ್ರ ಸ್ವಾಮಿಗಳು ಸ್ಥಾಪಿಸಿದ ಈ ದೇವಾಲಯಕ್ಕೆ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ತುಳಸಿ ಅರ್ಚನೆ, ಪುಷ್ಪಾರ್ಚನೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿಗೆ ಮಂಗಳಾರತಿ ಸಲ್ಲಿಸಿದರು. ನಂತರ ಪವಿತ್ರ ವೈಕುಂಠ ದ್ವಾರವನ್ನು ಉದ್ಘಾಟಿಸಿ ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು.
ರಾಯಚೂರು, ಡಿಸೆಂಬರ್ 30: ಮಂತ್ರಾಲಯ ರಾಯರ ಮಠದಲ್ಲಿ ವೈಕುಂಠ ಏಕಾದಶಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಮಂತ್ರಾಲಯದ ಓಲ್ಡ್ ಟೌನ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ವಿವಿಧ ಬಗೆಯ ಹೂವುಗಳಿಂದ ಶ್ರೀಮಠ ಹಾಗೂ ದೇವಸ್ಥಾನವನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಶ್ರೀ ರಾಘವೇಂದ್ರ ಸ್ವಾಮಿಗಳು ಸ್ಥಾಪಿಸಿದ ಈ ದೇವಾಲಯಕ್ಕೆ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ತುಳಸಿ ಅರ್ಚನೆ, ಪುಷ್ಪಾರ್ಚನೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿಗೆ ಮಂಗಳಾರತಿ ಸಲ್ಲಿಸಿದರು. ನಂತರ ಪವಿತ್ರ ವೈಕುಂಠ ದ್ವಾರವನ್ನು ಉದ್ಘಾಟಿಸಿ ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 30, 2025 12:16 PM