AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mantralaya Aradhana Mahotsava: ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!

Mantralaya Aradhana Mahotsava: ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!

ಭಾವನಾ ಹೆಗಡೆ
|

Updated on: Aug 31, 2026 | 11:17 AM

Share

ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವು ವೈಭವದಿಂದ ಜರುಗಿತು. ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು, ಬೃಂದಾವನಕ್ಕೆ ಅಲಂಕಾರ ಹಾಗೂ ವಸಂತೋತ್ಸವ ನಡೆಯಿತು. ಸಹಸ್ರಾರು ಭಕ್ತರು ದೂರದೂರುಗಳಿಂದ ಆಗಮಿಸಿ, ರಾಯರ ಕೃಪೆಯಿಂದ ಬಂದಿರುವುದಾಗಿ ನಂಬಿ, ಮಂತ್ರಾಲಯದಲ್ಲಿ ದೇವಲೋಕದ ಅನುಭವ ಪಡೆದರು. ರಾಯರು ಕೇಳದೆಯೇ ವರ ನೀಡುವ ಮಹಿಮರೆಂದು ಭಕ್ತರು ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದರು.

ರಾಯಚೂರು, ಆಗಸ್ಟ್ 31: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದಲ್ಲಿ 355ನೇ ಆರಾಧನಾ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಈ ಮಹೋತ್ಸವದಲ್ಲಿ ದೇಶದ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಪಾಲ್ಗೊಂಡರು. ಮಹೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ಶ್ರೀಮಠದಲ್ಲಿ ವಿಶೇಷ ಪೂಜೆಗಳು ಆರಂಭವಾದವು. ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಹಾಗೂ ಉತ್ಸವ ರಾಯರ ಪಾದಪೂಜೆ ಸೇರಿದಂತೆ ಹಲವು ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ಶ್ರೀ ರಾಘವೇಂದ್ರರ ಬೃಂದಾವನಕ್ಕೆ ವಿವಿಧ ಸುಗಂಧಿತ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us