ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ

Edited By:

Updated on: Apr 02, 2026 | 9:18 AM

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಾರ್ಚ್ ತಿಂಗಳ ಹುಂಡಿ ಎಣಿಕೆ ನಡೆದಿದ್ದು, ಕೇವಲ 21 ದಿನಗಳಲ್ಲಿ 2.48 ಕೋಟಿ ರೂಪಾಯಿ ನಗದು ಹಾಗೂ ಕೆಜಿಗಟ್ಟಲೆ ಬೆಳ್ಳಿ-ಚಿನ್ನದ ಆಭರಣಗಳು ಕಾಣಿಕೆಯಾಗಿ ಸಂಗ್ರಹವಾಗಿವೆ. ಹುಂಡಿ ಎಣಿಕೆಯ ವಿಡಿಯೋ ಮತ್ತು ಸಂಗ್ರಹವಾದ ನಗದು, ಚಿನ್ನ-ಬೆಳ್ಳಿ ಕುರಿತ ಮಾಹಿತಿ ಇಲ್ಲಿ ನೀಡಲಾಗಿದೆ.

ರಾಯಚೂರು, ಏಪ್ರಿಲ್ 2: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿಯ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More