Bharat Jodo Yatra: ಶ್ರೀನಗರದ ಸುರಿವ ಹಿಮದಲ್ಲಿ ರಾಹುಲ್ ಗಾಂಧಿ ಭಾಷಣ, ಸಂಪನ್ನಗೊಂಡಿತು ಯಾತ್ರೆ!

ಅರುಣ್​ ಕುಮಾರ್​ ಬೆಳ್ಳಿ

Updated on: Jan 30, 2023 | 2:12 PM

ಬೇರೆ ಬೇರೆ ಪಕ್ಷಗಳ ನಾಯಕರ ಜೊತೆ ಅನೇಕ ಕಾಂಗ್ರೆಸ್ ನಾಯಕರು ಸುರಿವ ಹಿಮದಲ್ಲಿ ನಿಂತು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯವರ ಭಾಷಣಗಳನ್ನು ಕೇಳಿಸಿಕೊಡರು.

ಶ್ರೀನಗರ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 12 ಬೇರೆ ಬೇರೆ ರಾಜ್ಯಗಳ ಮೂಲಕ 4,000 ಕ್ಕಿಂತ ಹೆಚ್ಚು ಕಿಲೋಮೀಟರ್ ದೂರವನ್ನು ಕ್ರಮಿಸಿದ ರಾಹುಲ್ ಗಾಂಧಿ (Rahul Gandhi) ಅವರ ತಂಡದ ಭಾರತ ಜೋಡೋ ಯಾತ್ರೆ (Bharat Jodo Yatra) ಶನಿವಾರ ಶ್ರೀನಗರದಲ್ಲಿ ಕೊನೆಗೊಳ್ಳುತ್ತಿದೆ. ಈ ಪ್ರದೇಶದಲ್ಲಿ ಒಂದೇ ಸಮ ಹಿಮ ಸುರಿಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಒಮರ್ ಅಬ್ದುಲ್ಲಾ (Omar Abdullah) ಮತ್ತು ಬೇರೆ ಬೇರೆ ಪಕ್ಷಗಳ ನಾಯಕರ ಜೊತೆ ಅನೇಕ ಕಾಂಗ್ರೆಸ್ ನಾಯಕರು ಸುರಿವ ಹಿಮದಲ್ಲಿ ನಿಂತು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯವರ ಭಾಷಣಗಳನ್ನು ಕೇಳಿಸಿಕೊಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.