ಬೆಂಗಳೂರು ನಗರ ಸಮುದ್ರದ ಮಧ್ಯಭಾಗಕ್ಕೆ ಸ್ಥಳಾಂತರಗೊಂಡಿದೆ! ಮುಖ್ಯಮಂತ್ರಿಗಳ ಖಡಕ್ ಎಚ್ಚರಿಕೆಯೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ!!

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Sep 05, 2022 | 11:02 AM

ಮೊನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದರು. ಆದರೆ ನಗರದ ಸ್ಥಿತಿಯಲ್ಲಿ ಮಾತ್ರ ಯಾವುದೇ ಸುಧಾರಣೆಯಿಲ್ಲ.

ಬೆಂಗಳೂರಿನ ನಿವಾಸಿಗಳು ಮತ್ತು ಮಾಧ್ಯಮಗಳು ಸರ್ಕಾರಕ್ಕೆ, ಮಹಾನಗರ ಪಾಲಿಕೆಗೆ (BBMP), ಪಾಲಿಕೆಯ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಉಗಿದು ಬೇಸತ್ತರೇ ಹೊರತು ನಗರದ ರಸ್ತೆಗಳು ಮಾತ್ರ ನೆಟ್ಟಗಾಗಲಿಲ್ಲ. ಮೊನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಒಂದು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದರು. ಆದರೆ ನಗರದ ಸ್ಥಿತಿಯಲ್ಲಿ ಮಾತ್ರ ಯಾವುದೇ ಸುಧಾರಣೆಯಿಲ್ಲ. ಈ ವಿಡಿಯೋ ನೋಡಿ, ಐಟಿ ರಾಜಧಾನಿ ಎಂದು ಕರೆಸಿಕೊಳ್ಳುವ ನಗರದಲ್ಲಿ ಇಂಥ ರಸ್ತೆಯೇ? ನಮಗಂತೂ ನಾಚಿಕೆಯಿಂದ ಮುಖ ಮುಚ್ಚಿಕೊಳ್ಳುವಂತಾಗಿದೆ ಮಾರಾಯ್ರೇ.