Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ, ಇಂದು ಪ್ರಧಾನಿ ಜತೆ ಮಾತುಕತೆ

Updated on: May 23, 2026 | 8:14 AM

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಶನಿವಾರ ಕೋಲ್ಕತ್ತಾಗೆ ಆಗಮಿಸುವ ಮೂಲಕ ತಮ್ಮ ನಾಲ್ಕು ದಿನಗಳ ಮೊದಲ ಅಧಿಕೃತ ಭಾರತ ಪ್ರವಾಸವನ್ನು ಆರಂಭಿಸಿದ್ದಾರೆ. ಮೇ 23 ರಿಂದ 26 ರವರೆಗೆ ನಡೆಯಲಿರುವ ಈ ಭೇಟಿಯು ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ, ರಕ್ಷಣೆ, ಇಂಧನ ಮತ್ತು ಇಂಡೋ-ಪೆಸಿಫಿಕ್ ಸಹಕಾರದ ಕುರಿತು ಕಾರ್ಯತಂತ್ರದ ಮಾತುಕತೆಗಳ ಮಧ್ಯೆ ಅತ್ಯಂತ ಮಹತ್ವ ಪಡೆದಿದೆ.

ಕೋಲ್ಕತ್ತಾ, ಮೇ 23: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಶನಿವಾರ ಕೋಲ್ಕತ್ತಾಗೆ ಆಗಮಿಸುವ ಮೂಲಕ ತಮ್ಮ ನಾಲ್ಕು ದಿನಗಳ ಮೊದಲ ಅಧಿಕೃತ ಭಾರತ ಪ್ರವಾಸವನ್ನು ಆರಂಭಿಸಿದ್ದಾರೆ. ಮೇ 23 ರಿಂದ 26 ರವರೆಗೆ ನಡೆಯಲಿರುವ ಈ ಭೇಟಿಯು ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ, ರಕ್ಷಣೆ, ಇಂಧನ ಮತ್ತು ಇಂಡೋ-ಪೆಸಿಫಿಕ್ ಸಹಕಾರದ ಕುರಿತು ಕಾರ್ಯತಂತ್ರದ ಮಾತುಕತೆಗಳ ಮಧ್ಯೆ ಅತ್ಯಂತ ಮಹತ್ವ ಪಡೆದಿದೆ.

ವಿಶೇಷವೆಂದರೆ, ಬರೋಬ್ಬರಿ 14 ವರ್ಷಗಳ ದೀರ್ಘ ಅವಧಿಯ ನಂತರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯೊಬ್ಬರು ಕೋಲ್ಕತ್ತಾಗೆ ಭೇಟಿ ನೀಡುತ್ತಿದ್ದಾರೆ. ರುಬಿಯೊ ಅವರ ಆಗಮನವನ್ನು ಭಾರತಕ್ಕೆ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಅವರು ‘X’ ಮಾಧ್ಯಮದಲ್ಲಿ ದೃಢೀಕರಿಸಿದ್ದಾರೆ. ಕೋಲ್ಕತ್ತಾ ಪ್ರವಾಸದ ನಂತರ ರುಬಿಯೊ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವ್ಯಾಪಾರ, ತಂತ್ರಜ್ಞಾನ, ರಕ್ಷಣೆ ಮತ್ತು ಕ್ವಾಡ್ (QUAD) ಒಕ್ಕೂಟದ ಕುರಿತು ಪ್ರಮುಖ ಮಾತುಕತೆ ನಡೆಸಲಿದ್ದಾರೆ.

ಅಮೆರಿಕ ಸ್ಟೇಟ್ ಡಿಪಾರ್ಟ್ಮೆಂಟ್ ರೂಬಿಯೊ ಅವರ ಕೋಲ್ಕತ್ತಾ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸದಿದ್ದರೂ, ಅವರು ಮದರ್ ತೆರೇಸಾ ಸ್ಥಾಪಿಸಿದ ಮಿಷನರೀಸ್ ಆಫ್ ಚಾರಿಟಿಯ ಪ್ರಧಾನ ಕಚೇರಿಯಾದ ‘ಮದರ್ ಹೌಸ್’ಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More