Nalin Kumar Kateel: ನನ್ನ ಮಾತಿನ ಮೇಲೆ ವಿಶ್ವಾಸವಿರಲಿ, ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಸರ್ಕಾರ ಬಿದ್ದುಹೋಗುತ್ತದೆ! ನಳಿನ್ ಕುಮಾರ್ ಕಟೀಲ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 19, 2023 | 6:04 PM

ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು 4 ದಿನ ತೆಗೆದುಕೊಂಡಿತ್ತು, ರಾಜ್ಯಕ್ಕೆ ಮುಖ್ಯಮಂತ್ರಿ ಬೇಕಾಗುತ್ತದೆ, ವಿರೋಧ ಪಕ್ಷ ನಾಯಕನಲ್ಲ ಅಂತ ನಳಿನ್ ಕುಮಾರ್ ಕಟೀಲ್ ಹೇಳಿದರು.

ಬೆಂಗಳೂರು: ವಿಧಾನ ಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿಜೆಪಿಯ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುವುದಾಗಿ ಹೇಳಿ ಕೆಲದಿನಗಳ ಮಟ್ಟಿಗೆ ಮುಗಿಮ್ಮಾಗಿದ್ದ ಮತ್ತು ಮಾಧ್ಯಮದವರ ಜೊತೆ ಅಷ್ಟಕಷ್ಟೇ ಮಾತಾಡುತ್ತಿದ್ದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಈಗ ಪುನಃ ಮೊದಲಿನ ಹಾಗೆ ಮಾತಾಡುತ್ತಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಟೀಲ್, ಡಿಸೆಂಬರ್ ನಲ್ಲಿ ರಾಜ್ಯದ ಚುನಾಯಿತ ಸರ್ಕಾರ (elected government) ಬಿದ್ದು ಹೋಗುತ್ತದೆ ಅಂತ ಘೋಷಿಸಿದರು! ಬಿಜೆಪಿ ಇದುವರೆಗೆ ವಿರೋಧ ಪಕ್ಷದ ನಾಯಕನನ್ನು (Leader of Opposition) ಆಯ್ಕೆ ಮಾಡದ್ದನ್ನು ಮಾಧ್ಯಮದವರರು ಪ್ರಶ್ನಿಸಿದಾಗ ಅವರು ಕೊಟ್ಟ ಉತ್ತರ ಅಸಂಮಜಸವಾಗಿತ್ತು. ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು 4 ದಿನ ತೆಗೆದುಕೊಂಡಿತ್ತು, ರಾಜ್ಯಕ್ಕೆ ಮುಖ್ಯಮಂತ್ರಿ ಬೇಕಾಗುತ್ತದೆ, ವಿರೋಧ ಪಕ್ಷ ನಾಯಕನಲ್ಲ ಅಂತ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.