ಮಂತ್ರಾಲಯಕ್ಕೆ ತೆರಳಿ ಗುರು ರಾಯರ ದರ್ಶನ ಪಡೆದ ನಟ ಧ್ರುವ ಸರ್ಜಾ; ಇಲ್ಲಿದೆ ವಿಡಿಯೋ
ರಾಘವೇಂದ್ರ ಸ್ವಾಮಿಗಳ ಆಶೀರ್ವಾದ ಪಡೆಯಲು ನಟ ಧ್ರುವ ಸರ್ಜಾ ಅವರು ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ದೇವರ ದರ್ಶನ ಮಾಡಿ ಧನ್ಯರಾಗಿದ್ದಾರೆ.
ನಟ ಧ್ರುವ ಸರ್ಜಾ (Dhruva Sarja) ಅವರು ಶೂಟಿಂಗ್ ಕೆಲಸಗಳಿಂದ ಕೊಂಚ ಬಿಡುವು ಮಾಡಿಕೊಂಡಿದ್ದಾರೆ. ಆ ಬಿಡುವಿನಲ್ಲಿ ರಾಘವೇಂದ್ರ ಸ್ವಾಮಿಗಳ (Raghavendra Swamy) ದರ್ಶನ ಪಡೆಯಲು ಅವರು ಮಂತ್ರಾಲಯಕ್ಕೆ ತೆರಳಿದ್ದಾರೆ. ಗುರುವಾರ (ಫೆ.03) ರಾಯರ ಸನ್ನಿಧಿಯಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭದೇಂದ್ರ ತೀರ್ಥರ ಆಶೀರ್ವಾದ ಪಡೆದು ಧ್ರುವ ಸರ್ಜಾ ಧನ್ಯರಾಗಿದ್ದಾರೆ. ಅವರು ಮಂತ್ರಾಲಯಕ್ಕೆ (Mantralaya Temple) ಭೇಟಿ ನೀಡಿದ ಸಂದರ್ಭದ ವಿಡಿಯೋ ಇಲ್ಲಿದೆ. ಮಂತ್ರಾಲಯದಲ್ಲಿ ಅವರನ್ನು ಕಂಡ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿ ಬಿದ್ದಿದ್ದಾರೆ. ಸೆಲ್ಫಿಗೆ ಪೋಸ್ ನೀಡುವ ಮೂಲಕ ಅಭಿಮಾನಿಗಳನ್ನು ಧ್ರುವ ಖುಷಿಪಡಿಸಿದ್ದಾರೆ. ‘ಪೊಗರು’ ಸಿನಿಮಾದ ಬಳಿಕ ಅವರ ‘ಮಾರ್ಟಿನ್’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಎ.ಪಿ. ಅರ್ಜುನ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.
ಇದನ್ನೂ ಓದಿ:
3 ತಿಂಗಳ ರಾಯರ ಸೇವೆ ಬಳಿಕ ನಡೆದಿದ್ದು ಪವಾಡ; ಬದುಕಿನ ಅಚ್ಚರಿಯ ವಿಚಾರ ತೆರೆದಿಟ್ಟ ನಟ ಜಗ್ಗೇಶ್
ಮಂತ್ರಾಲಯದಲ್ಲಿ ಪುನೀತ್ ಬಂದಾಗ ತೊಟ್ಟಿಲು ಅಲುಗಾಡಿದ ವಿಡಿಯೋ ವೈರಲ್; ಪೀಠಾಧಿಪತಿಗಳಿಂದ ಸ್ಪಷ್ಟನೆ