‘ಇನ್ಮುಂದೆ ಸಿನಿಮಾ ಲೇಟ್​ ಮಾಡಲ್ಲ’: ಭರವಸೆ ನೀಡಿದ ನಟ ಧ್ರುವ ಸರ್ಜಾ

Updated on: May 24, 2024 | 10:56 PM

ಸ್ಟಾರ್​ ನಟರ ಸಿನಿಮಾಗಳ ಬಿಡುಗಡೆ ತಡ ಆಗಿದ್ದರಿಂದ ಚಿತ್ರಮಂದಿರಗಳಿಗೆ ಜನರು ಬರುತ್ತಿಲ್ಲ ಎಂಬ ವಾದ ಇದೆ. ಈ ಬಗ್ಗೆ ಧ್ರುವ ಸರ್ಜಾ ಅವರಿಗೆ ಪ್ರಶ್ನೆ ಕೇಳಲಾಗಿದೆ. ‘ಮಾರ್ಟಿನ್​’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ. ಅಕ್ಟೋಬರ್​ 11ರಂದು ‘ಮಾರ್ಟಿನ್​’ ಬಿಡುಗಡೆ ಆಗಲಿದೆ ಎಂದು ಅವರು ಹೇಳಿದ್ದಾರೆ.

ಎ.ಪಿ. ಅರ್ಜುನ್​ ನಿರ್ದೇಶನದ ‘ಮಾರ್ಟಿನ್​’ (Martin) ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಕನ್ನಡ ಚಿತ್ರರಂಗದಲ್ಲಿ ಸ್ಟಾರ್​ ಹೀರೋಗಳ ಸಿನಿಮಾ ಬಿಡುಗಡೆ ಆಗುವುದು ವಿಳಂಬ ಆಗುತ್ತಿದೆ. ಆದ್ದರಿಂದ ಚಿತ್ರಮಂದಿರಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂಬುದು ಕೆಲವರ ವಾದ. ಅದಕ್ಕೆ ಧ್ರುವ ಸರ್ಜಾ (Dhruva Sarja) ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅದನ್ನೆಲ್ಲ ಬಗೆಹರಿಸಲು ವಾಣಿಜ್ಯ ಮಂಡಳಿ ಇದೆ. ಆ ವೇದಿಕೆಯಲ್ಲಿ ಅದನ್ನು ಮಾತನಾಡೋಣ. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ. ದೂರದಿಂದ ನೋಡಿದರೆ ಎಲ್ಲವೂ ಚೆನ್ನಾಗಿ ಕಾಣಿಸುತ್ತದೆ. ಹತ್ತಿರದಿಂದ ನೋಡಿದಾಗ ಕಲ್ಲುಗಳು ಕಾಣಿಸುತ್ತವೆ. ನಮ್ಮದೇ ಆದಂತಹ ಸಮಸ್ಯೆಗಳು ಇವೆ. ಸಿನಿಮಾಗಳು ತಡ ಆಗೋದಕ್ಕೆ ಕಾರಣಗಳಿವೆ. ಅವರ ದೃಷ್ಟಿಕೋನದಲ್ಲಿ ನೋಡಿದರೆ ನಾವು ಇಷ್ಟು ತಡ ಮಾಡುವುದು ತಪ್ಪು. ನಮ್ಮ ದೃಷ್ಟಿಕೋನದಲ್ಲಿ ನೋಡಿದಾಗ ಕಾರಣಗಳು ಹುಟ್ಟಿಕೊಳ್ಳುತ್ತವೆ. ಇನ್ಮುಂದೆ ಲೇಟ್​ ಮಾಡಲ್ಲ. ಫಾಸ್ಟ್​ ಆಗಿ ಸಿನಿಮಾ ಮಾಡ್ತೀನಿ. ಧನ್ಯವಾದಗಳು’ ಎಂದಿದ್ದಾರೆ ನಟ ಧ್ರುವ ಸರ್ಜಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More