ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್ ವಿಡಿಯೋ

Updated on: Oct 06, 2024 | 8:22 PM

ಬಿಡುಗಡೆಗೆ ಸಜ್ಜಾಗಿರುವ ‘ಮಾರ್ಟಿನ್​’ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯುತ್ತಿದೆ. ನಟ ಧ್ರುವ​ ಸರ್ಜಾ, ನಟಿ ವೈಭವಿ ಶಾಂಡಿಲ್ಯ, ನಿರ್ದೇಶಕ ಎ.ಪಿ. ಅರ್ಜುನ್ ಸೇರಿದಂತೆ ಇಡೀ ಚಿತ್ರತಂಡದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಅಭಿಮಾನಿಗಳ ಸಮ್ಮುಖದಲ್ಲಿ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್​’ ಸಿನಿಮಾ ಬಿಡುಗಡೆ ಆಗಲಿದೆ. ಧ್ರುವ ಸರ್ಜಾ ಅವರು ಈ ಸಿನಿಮಾದಲ್ಲಿ ಸಖತ್ ಮಾಸ್​ ಆಗಿ ಕಾಣಿಸಿಕೊಂಡಿದ್ದಾರೆ. ಭಾನುವಾರ (ಅಕ್ಟೋಬರ್​ 6) ದಾವಣಗೆರೆಯಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯುತ್ತಿದೆ. ಚಿತ್ರತಂಡದವರು ಅಭಿಮಾನಿಗಳ ಸಮ್ಮುಖದಲ್ಲಿ ಸಮಾರಂಭ ನಡೆಯುತ್ತಿದೆ. ‘ಮಾರ್ಟಿನ್’ ಪ್ರೀ-ರಿಲೀಸ್​ ಕಾರ್ಯಕ್ರಮದ ಲೈವ್​ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More