‘ಮಾರ್ಟಿನ್’ ಟ್ರೇಲರ್ ಲಾಂಚ್ನಲ್ಲಿ ಆರು ಭಾಷೆಗಳಲ್ಲಿ ಮಾತನಾಡಿ ಅಚ್ಚರಿ ಮೂಡಿಸಿದ ಅರ್ಜುನ್ ಸರ್ಜಾ
21 ದೇಶಗಳ ಪತ್ರಕರ್ತರು ಮುಂಬೈಗೆ ಬಂದಿದ್ದಾರೆ. ಅವರೆಲ್ಲರ ಸಮ್ಮುಖದಲ್ಲಿ ‘ಮಾರ್ಟಿನ್’ ಟ್ರೇಲರ್ ಅನಾವರಣ ಆಗಿದೆ. ಇಡೀ ಸಿನಿಮಾ ಹೇಗೆ ಮೂಡಿಬಂದಿದೆ ಎಂಬುದರ ಝಲಕ್ ತೋರಿಸುವ ರೀತಿಯಲ್ಲಿ ಟ್ರೇಲರ್ ಸಿದ್ಧವಾಗಿದೆ. ಮೇಕಿಂಗ್ ನೋಡಿ ಧ್ರುವ ಸರ್ಜಾ ಫ್ಯಾನ್ಸ್ ವಾವ್ ಎಂದಿದ್ದಾರೆ. ಈ ಕಾರ್ಯಕ್ರಮಕ್ಕೆ ಅರ್ಜುನ್ ಸರ್ಜಾ ಕೂಡ ಬಂದಿದ್ದರು.
ಅರ್ಜುನ್ ಸರ್ಜಾ ಅವರು ಕಳೆದ ಹಲವು ವರ್ಷಗಳಿಂದ ದಕ್ಷಿಣ ಭಾರತದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಹೀಗಾಗಿ ಎಲ್ಲಾ ಭಾಷೆಗಳ ಪರಿಚಯ ಅವರಿಗೆ ಇದೆ. ‘ಮಾರ್ಟಿನ್’ ಸಿನಿಮಾ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಮುಂಬೈನಲ್ಲಿ ಅದ್ಧೂರಿಯಾಗಿ ಈ ಕಾರ್ಯಕ್ರಮ ನಡೆದಿದೆ. ಅರ್ಜುನ್ ಸರ್ಜಾ ‘ಮಾರ್ಟಿನ್’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಹೀಗಾಗಿ ಅವರು ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದರು. ಅವರು ಆರು ಭಾಷೆಗಳಲ್ಲಿ ಮಾತನಾಡಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಎಲ್ಲರನ್ನೂ ಸ್ವಾಗತಿಸಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಅರ್ಜುನ್ ಸರ್ಜಾ ಅವರು ಚಿತ್ರರಂಗಕ್ಕೆ ಕಾಲಿಟ್ಟು 44 ವರ್ಷಗಳು ಕಳೆದಿವೆ. ಈ ಅವಧಿಯಲ್ಲಿ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ಅರ್ಜುನ್ ಸರ್ಜಾ ಅವರು ‘ಮಾರ್ಟಿನ್ ಟ್ರೇಲರ್ ಲಾಂಚ್ಗೆ ಬಂದಿದ್ದು ಏಕೆ ಎಂಬುದನ್ನು ವಿಡಿಯೋದಲ್ಲಿ ವಿವರಿಸಿದ್ದಾರೆ. ವಿದೇಶಿ ಪತ್ರಕರ್ತರು ಈ ಕಾರ್ಯಕ್ರಮದಲ್ಲಿ ಇದ್ದರು. ಇದರ ಜೊತೆಗೆ ಧ್ರುವ ಅವರ ಸಹೋದರಿಯ ಮಗ ಮತ್ತೊಂದು ಈ ಚಿತ್ರಕ್ಕೆ ಅರ್ಜುನ್ ಸರ್ಜಾ ಅವರೇ ಕಥೆ ಬರೆದಿದ್ದಾರೆ ಅನ್ನೋದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.