Captain Pranjal: ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅಂತಿಮ ದರ್ಶನ, ಯಾತ್ರೆಯ ನೇರ ಪ್ರಸಾರ ಇಲ್ಲಿದೆ

| Updated By: ವಿವೇಕ ಬಿರಾದಾರ

Updated on: Nov 25, 2023 | 11:07 AM

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಕರ್ನಾಟಕದ ಹೆಮ್ಮೆಯ ಕುವರ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಕ್ಯಾಪ್ಟನ್ ಪ್ರಾಂಜಲ್ ​ಅವರು ಪಾರ್ಥಿವ ಶರೀರ ರಾಜ್ಯಕ್ಕೆ ಆಗಮಿಸಿದೆ. ಕ್ಯಾಪ್ಟನ್ ಪ್ರಾಂಜಲ್ ಅವರ ಹುಟ್ಟೂರಾದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​​ನ ನಿವಾಸದಲ್ಲಿ ಅಂತಿಮ ದರ್ಶನ ಅವಕಾಶ ಕಲ್ಪಿಸಲಾಗಿದೆ.

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಕರ್ನಾಟಕದ ಹೆಮ್ಮೆಯ ಕುವರ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಕ್ಯಾಪ್ಟನ್ ಪ್ರಾಂಜಲ್ ​ಅವರು ಪಾರ್ಥಿವ ಶರೀರ ರಾಜ್ಯಕ್ಕೆ ಆಗಮಿಸಿದೆ. ಕ್ಯಾಪ್ಟನ್ ಪ್ರಾಂಜಲ್ ಅವರ ಹುಟ್ಟೂರಾದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​​ನ ನಿವಾಸದಲ್ಲಿ ಅಂತಿಮ ದರ್ಶನ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 12.30ಕ್ಕೆ ನಿವಾಸದಿಂದ ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯುತ್ತದೆ. ಮೆರವಣಿಗೆ ಕಲ್ಲುಬಾಳು ರಸ್ತೆ ಮೂಲಕ ಜಿಗಣಿಯ ಒಡಿಸಿ ಸರ್ಕಲ್​, ಜಿಗಣಿ ರಸ್ತೆ ಮೂಲಕ ಹರಪನ್ನಹಳ್ಳಿ – ಕೊಪ್ಪ ಗೇಟ್ – ಬೇಗಿಹಳ್ಳಿ – ಬನ್ನೇರುಘಟ್ಟ ರಸ್ತೆ – ನೈಸ್​ ರೋಡ್ – ಕೂಡ್ಲುಗೇಟ್​ ಮೂಲಕ ಸೋಮಸುಂದರಪಾಳ್ಯ ವಿದ್ಯುತ್​ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಕ್ಯಾಪ್ಟನ್​ ಪ್ರಾಂಜಲ್​ ಅವರ ಅಂತ್ಯಕ್ರಿಯೆ ನೆರವೇರುತ್ತದೆ. ನಡೆಯುವ ಎಂ.ವಿ.ಪ್ರಾಂಜಲ್ ಅಂತ್ಯಸಂಸ್ಕಾರ

Published on: Nov 25, 2023 11:06 AM