ಗದಗದಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಬಿಂದಾಸ್ ಎಂಟ್ರಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

Edited By:

Updated on: Apr 03, 2026 | 8:02 AM

ಗದಗ ನಗರದ ಪುಟ್ಟರಾಜ್ ನಗರದಲ್ಲಿ ಮುಸುಕುಧಾರಿ ಕಳ್ಳರು ಅಟ್ಟಹಾಸ ಮೆರೆದಿದ್ದು, ಮನೆಯ ಬೀಗ ಮುರಿದು 70 ಗ್ರಾಂ ಚಿನ್ನ ದೋಚಿದ್ದಾರೆ. ಮಧ್ಯರಾತ್ರಿ ಸಮಯದಲ್ಲಿ ಮಾರಕಾಸ್ತ್ರ ಹಿಡಿದು ಗಲ್ಲಿಗಳಲ್ಲಿ ಸುತ್ತಾಡುತ್ತಿರುವ ಕಳ್ಳರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರು ಆತಂಕಗೊಂಡಿದ್ದಾರೆ. ಭದ್ರತೆ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ. ಸಿಸಿಟಿವಿ ವಿಡಿಯೋ ಇಲ್ಲಿದೆ.

ಗದಗ, ಏಪ್ರಿಲ್ 3: ಜಿಲ್ಲೆಯಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಮತ್ತೆ ಪ್ರತ್ಯಕ್ಷವಾಗಿದ್ದು, ಸರಣಿ ಕಳ್ಳತನದ ಮೂಲಕ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ. ನಗರದ ಪುಟ್ಟರಾಜ್ ನಗರ ಮತ್ತು ಕೇಶವ್ ಪಾರ್ಕ್ ಪ್ರದೇಶದಲ್ಲಿ ನಡುರಾತ್ರಿ ಮಾರಕಾಸ್ತ್ರ ಹಿಡಿದು ಸಂಚರಿಸುತ್ತಿರುವ ಐವರು ಮುಸುಕುಧಾರಿಗಳ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಡಾವಣೆಯ ನಿವಾಸಿ ವಿಜಯಲಕ್ಷ್ಮೀ ಎಂಬುವವರು ಜನ್ಮದಿನದ ಕಾರ್ಯಕ್ರಮಕ್ಕೆ ತಂದೆಯ ಮನೆಗೆ ಹೋಗಿದ್ದ ವೇಳೆ, ಕಳ್ಳರು ಮನೆಯ ಬೀಗ ಮುರಿದು ಸುಮಾರು 70 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ರಾತ್ರಿ 8 ಗಂಟೆಯಾಗುತ್ತಿದ್ದಂತೆ ಜನ ಹೊರಬರಲು ಹೆದರುತ್ತಿದ್ದು, ಕೂಡಲೇ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More