ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಭಾರತದ ಪ್ರಮುಖ ವೈದ್ಯಕೀಯ ಸಂಸ್ಥೆಗಳಲ್ಲಿ ಒಂದಾದ ಏಮ್ಸ್ ಭೋಪಾಲ್‌ನಲ್ಲಿ ನಡೆದ ಚಿನ್ನದ ಸರದ ಕಳ್ಳತನ ಘಟನೆಯು ಭದ್ರತೆಯ ಬಗ್ಗೆ ಆತಂಕ ಮೂಡಿಸಿದೆ. ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಆಸ್ಪತ್ರೆಯ ಲಿಫ್ಟ್‌ನಲ್ಲಿ ಮಹಿಳಾ ಉದ್ಯೋಗಿಯ ಸರ ದೋಚಿ ಪರಾರಿಯಾಗಿದ್ದಾನೆ. ಆ ಮಹಿಳೆ ಏಮ್ಸ್‌ನ ಸ್ತ್ರೀರೋಗ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿ.
ಭೋಪಾಲ್, ಜನವರಿ 27: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಇತ್ತೀಚೆಗೆ ನಡೆದ ಘಟನೆಯು ಭದ್ರತಾ ಲೋಪವನ್ನು ಎತ್ತಿ ತೋರಿಸಿದೆ. ಭೋಪಾಲ್‌ನ (Bhopal) ಏಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ಲಿಫ್ಟ್‌ನಿಂದ ಇಳಿಯುತ್ತಿದ್ದಾಗ, ಮಾಸ್ಕ್ ಧರಿಸಿದ್ದ ಕಳ್ಳನೊಬ್ಬ ಆಕೆಯ ಕುತ್ತಿಗೆಯಿಂದ ಮಂಗಳಸೂತ್ರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಆಸ್ಪತ್ರೆಯೊಳಗಿನ ಲಿಫ್ಟ್‌ನ ಒಳಗೆ ನಡೆದಿರುವುದು ಆತಂಕಕಾರಿ ಸಂಗತಿ. ಸಿಸಿಟಿವಿ ದೃಶ್ಯಗಳ ಪ್ರಕಾರ, ಆರೋಪಿ ಆ ಮಹಿಳೆಯೊಂದಿಗೆ ಲಿಫ್ಟ್‌ನಲ್ಲಿಯೇ ಬಂದಿದ್ದಾನೆ. ಆಕೆ ಹೊರಗೆ ಹೋಗಲು ಲಿಫ್ಟ್ ಬಾಗಿಲು ತೆರೆದ ತಕ್ಷಣ ಅವನು ಆಕೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಕಸಿದುಕೊಂಡು ಓಡಿಹೋದನು. ಆಕೆ ಕಿರುಚುತ್ತಾ ಓಡಿದರೂ ಆತ ಪರಾರಿಯಾಗಿದ್ದಾನೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

