ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ

Edited By:

Updated on: Jul 26, 2026 | 9:15 PM

ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ (ಜುಲೈ 25) ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿದ್ದು, ರಾತ್ರಿ 10:45ರ ಸುಮಾರಿಗೆ ಏಕಾಏಕಿ ಕಾರು ಸ್ಫೋಟಗೊಂಡಿದೆ. ಘಟನೆಯ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ (Scene of Crime) ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಸ್ಟೋಟದ ಶಂಕೆ ವ್ಯಕ್ತವಾಗಿದ್ದು ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಬಾಗಲಕೋಟೆ, (ಜುಲೈ 26): ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ (ಜುಲೈ 25) ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿದ್ದು, ರಾತ್ರಿ 10:45ರ ಸುಮಾರಿಗೆ ಏಕಾಏಕಿ ಕಾರು ಸ್ಫೋಟಗೊಂಡಿದೆ. ಘಟನೆಯ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ (Scene of Crime) ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಸ್ಟೋಟದ ಶಂಕೆ ವ್ಯಕ್ತವಾಗಿದ್ದು ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇನ್ನು ಈ ಕಾರು ಬ್ಲಾಸ್ಟ್‌ ಘಟನೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More