AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು: 292 ಗಿಡ ಪತ್ತೆ ಮಾಡಿದ ಅರಣ್ಯ ಇಲಾಖೆ

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು: 292 ಗಿಡ ಪತ್ತೆ ಮಾಡಿದ ಅರಣ್ಯ ಇಲಾಖೆ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 28, 2026 | 6:34 PM

Share

ಚಾಮರಾಜನಗರದ ಬಿಳಿಗಿರಿ ಟೈಗರ್ ರಿಸರ್ವ್ ಅರಣ್ಯದಲ್ಲಿ ಅಬಕಾರಿ ಮತ್ತು ಅರಣ್ಯ ಇಲಾಖೆಗಳು ಜಂಟಿ ಕಾರ್ಯಾಚರಣೆ ನಡೆಸಿ 292 ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ನಾಶಪಡಿಸಿವೆ. ಸುಮಾರು 210 ಕೆಜಿ ತೂಕದ, ಕೋಟ್ಯಾಂತರ ರೂಪಾಯಿ ಮೌಲ್ಯದ ಹಸಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅರಣ್ಯದೊಳಗೆ ಈ ಪ್ರಮಾಣದ ಗಾಂಜಾ ಬೆಳೆಯಲು ಸಿಬ್ಬಂದಿಯ ನೆರವು ಅನಿವಾರ್ಯ ಎಂಬ ಅನುಮಾನ ಕಾಡುತ್ತಿದೆ.

ಚಾಮರಾಜನಗರ, ಸೆಪ್ಟೆಂಬರ್​​ 28: ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ (ಬಿಆರ್‌ಟಿ) ವ್ಯಾಪ್ತಿಯ ಕೋಳಿಹಟ್ಟಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 292 ಗಾಂಜಾ ಗಿಡಗಳನ್ನು ಅಬಕಾರಿ ಮತ್ತು ಅರಣ್ಯ ಇಲಾಖೆಗಳ ಜಂಟಿ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿ ನಾಶಪಡಿಸಿದೆ. ಇಷ್ಟು ಬೃಹತ್ ಪ್ರಮಾಣದ ಗಾಂಜಾ ಕೃಷಿ ಅರಣ್ಯದೊಳಗೆ ನಡೆದಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅರಣ್ಯ ವ್ಯಾಪ್ತಿಯಲ್ಲಿ ಇಂತಹ ಕೃತ್ಯಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಯ ಸಹಕಾರವಿಲ್ಲದೆ ಸಾಧ್ಯವಿಲ್ಲ ಎಂಬ ಗುಮಾನಿ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ, ಸುಮಾರು 210 ಕೆಜಿ ತೂಕದ ಹಸಿ ಗಾಂಜಾವನ್ನು ವಶಪಡಿಸಿಕೊಂಡು ನಾಶ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More