ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ನಲ್ಲಿ ಗಾಂಜಾ ಘಮಲು: 292 ಗಿಡ ಪತ್ತೆ ಮಾಡಿದ ಅರಣ್ಯ ಇಲಾಖೆ
ಚಾಮರಾಜನಗರದ ಬಿಳಿಗಿರಿ ಟೈಗರ್ ರಿಸರ್ವ್ ಅರಣ್ಯದಲ್ಲಿ ಅಬಕಾರಿ ಮತ್ತು ಅರಣ್ಯ ಇಲಾಖೆಗಳು ಜಂಟಿ ಕಾರ್ಯಾಚರಣೆ ನಡೆಸಿ 292 ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ನಾಶಪಡಿಸಿವೆ. ಸುಮಾರು 210 ಕೆಜಿ ತೂಕದ, ಕೋಟ್ಯಾಂತರ ರೂಪಾಯಿ ಮೌಲ್ಯದ ಹಸಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅರಣ್ಯದೊಳಗೆ ಈ ಪ್ರಮಾಣದ ಗಾಂಜಾ ಬೆಳೆಯಲು ಸಿಬ್ಬಂದಿಯ ನೆರವು ಅನಿವಾರ್ಯ ಎಂಬ ಅನುಮಾನ ಕಾಡುತ್ತಿದೆ.
ಚಾಮರಾಜನಗರ, ಸೆಪ್ಟೆಂಬರ್ 28: ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ (ಬಿಆರ್‌ಟಿ) ವ್ಯಾಪ್ತಿಯ ಕೋಳಿಹಟ್ಟಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 292 ಗಾಂಜಾ ಗಿಡಗಳನ್ನು ಅಬಕಾರಿ ಮತ್ತು ಅರಣ್ಯ ಇಲಾಖೆಗಳ ಜಂಟಿ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿ ನಾಶಪಡಿಸಿದೆ. ಇಷ್ಟು ಬೃಹತ್ ಪ್ರಮಾಣದ ಗಾಂಜಾ ಕೃಷಿ ಅರಣ್ಯದೊಳಗೆ ನಡೆದಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅರಣ್ಯ ವ್ಯಾಪ್ತಿಯಲ್ಲಿ ಇಂತಹ ಕೃತ್ಯಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಯ ಸಹಕಾರವಿಲ್ಲದೆ ಸಾಧ್ಯವಿಲ್ಲ ಎಂಬ ಗುಮಾನಿ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ, ಸುಮಾರು 210 ಕೆಜಿ ತೂಕದ ಹಸಿ ಗಾಂಜಾವನ್ನು ವಶಪಡಿಸಿಕೊಂಡು ನಾಶ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
